8:19 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

28/07/2026, 12:46

ಮಂಗಳೂರು(reporterkarnataka.com):ಸುಮಾರು 12 ವರ್ಷಗಳ ಹಿಂದೆ ನಡೆದ ಗಂಗಾಧರ ಪಾಂಗಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸತೀಶ್ ಬೈಕಂಪಾಡಿ ಸೇರಿ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

2014, ಮೇ 15ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೀನಕಳಿಯಾ ಗಣೇಶ್ ಶಿಪ್ಪಿಂಗ್ ಗೋಡೌನ್ ಬಳಿ ಸಾರ್ವಜನಿಕ ಡಾಂಬಾರು ರಸ್ತೆಯಲ್ಲಿ ಮೀನಕಳಿಯ ನಿವಾಸಿ ಗಂಗಾಧರ ಪಾಂಗಾಳ ಎಂಬವರನ್ನು ಆರೋಪಿಗಳಾದ ಸತೀಶ್ ಬೈಕಂಪಾಡಿ, ಪುಷ್ಪರಾಜ್, ಹರೀಶ್ ಬೈಕಂಪಾಡಿ, ಭಾಸ್ಕರ್ ಬೈಕಂಪಾಡಿ ಎಂಬವರುಗಳು ಸೇರಿ ಹಳೆ ದ್ವೇಷದಿಂದ ಒಳಸಂಚು ನಡೆಸಿ ಕೊಲೆ ಮಾಡಿದ್ದರು. ಆದರೆ ಮೊದಲಿಗೆ ರಸ್ತೆಯಲ್ಲಿ ಅಪಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿ, ಅಪಘಾತ ಪ್ರಕರಣ ದಾಖಲಾಗಿದ್ದು, ನಂತರ ಪ್ರಾಥಮಿಕ ತನಿಖೆಯಲ್ಲಿ ಕೊಲೆ ಎಂದು ಕಂಡು ಬಂದಿದ್ದರಿಂದ ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಅ.ಕ್ರ ನಂಬ್ರ 98/2014 ಕಲಂ: 302, 201, 109, 120(ಬಿ) ಸಹಿತ 34 ಐಪಿಸಿರಂತೆ ಪ್ರಕರಣ ದಾಖಲಾಗಿರುತ್ತದೆ.
ಗಂಗಾಧರ ಪಾಂಗಳ ಅವರ ಕೊಲೆ ಪ್ರಕರಣದ 1ನೇ ಆರೋಪಿ ಸತೀಶ್ ಬೈಕಂಪಾಡಿ ಎಂಬಾತನನ್ನು ಬೈಕಂಪಾಡಿ ಮೊಗವೀರ ಮಹಾಸಭಾದ ಸದಸ್ಯತ್ವದಿಂದ ಅಮಾನತುಪಡಿಸಲು ಮೃತ ಗಂಗಾಧರ ಪಾಂಗಾಳರವರೇ ಮೂಲ ಕಾರಣಕರ್ತರೆಂದು ಭಾವಿಸಿ ಅವರ ಮೇಲೆ ದ್ವೇಷ ಸಾಧಿಸಿದ ಆರೋಪಿತರುಗಳು ಪೂರ್ವ ನಿಯೋಜಿತ ಒಳಸಂಚು ರೂಪಿಸಿ ಬೊಲೇರೋ ವಾಹನ ಮೂಲಕ ಗಂಗಾಧರ ಪಾಂಗಾಳ ಅವರ ಸ್ಕೂಟರ್ ಗೆ ಉದ್ದೇಶ ಪೂರ್ವಕವಾಗಿ ಹಿಂದಿನಿಂದ ಹಿಂಬಾಲಿಸಿ ಬಂದು ಡಿಕ್ಕಿ ಹೊಡೆಸಿದ್ದು ಗಂಗಾಧರ ಪಾಂಗಾಳರವರು ಕೆಳಗೆ ಬಿದ್ದು ತಲೆ, ಮೈಕೈಗೆ ಪೆಟ್ಟಾಗಿ ಮೃತಪಟ್ಟಿರುವುದನ್ನು ಧೃಢಪಡಿಸಿಕೊಂಡ ನಂತರ ಆರೋಪಿತರುಗಳು ತಾವು ಬಂದ ವಾಹನದ ಸಮೇತ ಸ್ಥಳದಿಂದ ಪರಾರಿಯಾಗಿದ್ದರು.
ಈ ಬಗ್ಗೆ ತನಿಖೆ ಕೈಗೊಂಡು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದ.ಕ ಮಂಗಳೂರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು.
ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನ್ಯಾಯಾಧೀಶರು
ಒಂದರಿಂದ ನಾಲ್ಕನೆಯ ಆರೋಪಿತರ ವಿರುದ್ಧ ಆರೋಪ ಸಾಬೀತಾದ ಕಾರಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿರುತ್ತಾರೆ.
ಆರೋಪಿತರಾದ A1. ಸತೀಶ್ ಬೈಕಂಪಾಡಿ A3. ಹರೀಶ್ ಬೈಕಂಪಾಡಿ A4. ಭಾಸ್ಕರ್ ಬೈಕಂಪಾಡಿ (ಈ 03 ಜನ ಆರೋಪಿಗಳು ಸಹೋದರರಾಗಿರುತ್ತಾರೆ.) ಇವರು ಪಣಂಬೂರು ಠಾಣಾ ವ್ಯಾಪ್ತಿಯ ಮೀನಕಳಿಯ ವಾಸಿಗಳಾಗಿದ್ದು, ಮತ್ತೊಬ್ಬ ಆರೋಪಿ A2 ಪುಷ್ಪರಾಜ್ ಈತನು ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದವನಾಗಿರುತ್ತಾನೆ. ಈ ಎಲ್ಲಾ 4 ಜನ ಆರೋಪಿಗಳಿಗೆ ನ್ಯಾಯಾಧೀಶರಾದ ಜಗದೀಶ್ ವಿ. ಎನ್. ಅವರು ಶಿಕ್ಷೆಯನ್ನು ಪ್ರಕಟಿಸಿ ಆದೇಶಿಸಿರುತ್ತಾರೆ.

ಆರೋಪಿಗಳಾದ ಎ-1 ಆರೋಪಿ ಸತೀಶ್ ಬೈಕಂಪಾಡಿ(57 ವರ್ಷ), ಎ-3 ಆರೋಪಿ ಹರೀಶ್ ಬೈಕಂಪಾಡಿ(61 ವರ್ಷ), ಎ-4. ಆರೋಪಿ ಭಾಸ್ಕರ್ ಬೈಕಂಪಾಡಿ(63 ವರ್ಷ) ರವರುಗಳಿಗೆ ಕಲಂ:302, 120, 109 ಜೊತೆ 34 ಐಪಿಸಿ ರಲ್ಲಿ ಜೀವಾವಧಿ ಶಿಕ್ಷೆ ಮತ್ತು ₹.15 ಸಾವಿರ ದಂಡ ವಿಧಿಸಿರುವುದಾಗಿದೆ. ದಂಡ ಪಾವತಿಸಲು ತಪ್ಪಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಸಾದಾಶಿಕ್ಷೆ ಮತ್ತು ಪ್ರಕರಣದಲ್ಲಿ ಎ-2 ಆರೋಪಿ ಪುಷ್ಪರಾಜ್ (47 ವರ್ಷ ) ಎಂಬಾತನಿಗೆ ಕಲಂ:302, 120, ಜೊತೆ 34 ಐಪಿಸಿ ರಲ್ಲಿ ಜೀವಾವಧಿ ಶಿಕ್ಷೆ ಮತ್ತು ₹.15,000 ದಂಡ ಪಾವತಿಸಲು ತಪ್ಪಿದ್ದಲ್ಲಿ 1 ವರ್ಷ ಹೆಚ್ಚುವರಿ ಸಾದಾಶಿಕ್ಷೆ ಹಾಗು ಕಲಂ 201 r/w 34 IPC ಕಲಂನಡಿ ಎಲ್ಲಾ ಆರೋಪಿತರಿಗೆ ಎರಡು ವರ್ಷ ಸಾದಾ ಶಿಕ್ಷೆ ಮತ್ತು ತಲಾ ₹.1000 ದಂಡ, ದಂಡ ಪಾವತಿಸಲು ತಪ್ಪಿದರೆ ಒಂದು ತಿಂಗಳ ಹೆಚ್ಚುವರಿ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿರುತ್ತಾರೆ. ಮುಂದುವರೆದು 60000/- ರೂಪಾಯಿ ವಿಧಿಸಿದ ದಂಡದ ಪೈಕಿ ರೂ 50000/- ನ್ನು ಪರಿಹಾರವಾಗಿ ಮೃತನ ಮಗಳಿಗೆ ಮತ್ತು 16000/- ರೂ ನ್ನು ಸರ್ಕಾರಕ್ಕೆ ಪಾವತಿಸಲು ಆದೇಶಿಸಲಾಗಿದೆ. ಕೃತ್ಯಕ್ಕೆ ಬಳಸಿದ ಆರೋಪಿತರಿಗೆ ಸೇರಿದ ಬೊಲೆರೋ, ರೀಡ್ಝ್ ಹಾಗೂ ಮಾರುತಿ ಕಾರನ್ನು ವಶಕ್ಕೆ ಪಡೆದು ಸರ್ಕಾರಕ್ಕೆ ಮುಟ್ಟಗೋಲು ಹಾಕಲು ಆದೇಶಿರುತ್ತೆ. ನ್ಯಾಯಾಲಯದ ಆದೇಶದಂತೆ 4 ಜನ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆಯನ್ನು ಪಣಂಬೂರು ಪೊಲೀಸ್ ಠಾಣೆಯ ಅಗಿನ ಪೊಲೀಸ್ ನಿರೀಕ್ಷಕರುಗಳಾದ ಎನ್.ಆರ್ ಮುಕ್ರಿ, ಭಾಸ್ಕರ್ ರೈ, ರವೀಶ್ ನಾಯಕ್ ಅರವರುಗಳು ಭಾಗಶಃ ತನಿಖೆ ನಡೆಸಿದ್ದು, ಲೋಕೇಶ್ ಎ.ಸಿ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿರುತ್ತಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ
ಜ್ಯೋತಿ ಪ್ರಮೋದ ನಾಯಕ ಅವರು ವಾದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು