12:06 AM Friday10 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ…

ಇತ್ತೀಚಿನ ಸುದ್ದಿ

ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ

11/01/2025, 00:00

ನವದೆಹಲಿ(reporterkarnataka.com): ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರದ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು.


ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ನಡೆದ ಈ ಸಭೆಯಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ ಅಧ್ಯಕ್ಷ ಅಮಿತವ್ ಮುಖರ್ಜಿ, ಕಾನೂನು ಸಚಿವಾಲಯದ ಅಧಿಕಾರಿಗಳು ಹಾಗೂ ಹಲವು ಗಣಿ ಕಂಪನಿಗಳ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಪರಿಣಾಮ ದೇಶಿಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಒಟ್ಟಾರೆ ಸಾಧಕ ಬಾಧಕಗಳ ಬಗ್ಗೆ ಸಚಿವ ಮೇಘವಾಲ್ ಅವರೊಂದಿಗೆ ಮಾಹಿತಿ ಹಂಚಿಕೊಂಡರು.
ಸಭೆಯಲ್ಲಿ ಕೇಂದ್ರದ ಉಕ್ಕು ಸಚಿವರು ಹಲವು ಮಹತ್ವದ ಅಂಶಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. 2047ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಾಕಾರ ಮಾಡುವ ಗುರಿ ಹೊಂದಿದ್ದಾರೆ. ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿಗಳು ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತಿದ್ದಾರೆ.
ಮುಖ್ಯವಾಗಿ 2030ನೇ ವರ್ಷದ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿಯನ್ನು ನಿಗದಿ ಮಾಡಿದ್ದಾರೆ. ಇಂಥ ಮಹತ್ವಾಕಾಂಕ್ಷೆ ಗುರಿಗಳು ನಮ್ಮ ಮುಂದೆ ಇರುವಾಗ ಗಣಿ ಮತ್ತು ಉಕ್ಕು ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಸಚಿವರು ಹೇಳಿದರು.
ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿದ ಸಚಿವ ಮೇಘವಾಲ್ ಅವರು, ಪ್ರಧಾನಿಗಳ ಕನಸು ನನಸು ಮಾಡಬೇಕಾದರೆ ನಾವು ಒಮ್ಮತ ಹೆಜ್ಜೆಗಳನ್ನು ಇಟ್ಟು ಕ್ರಮ ವಹಿಸಬೇಕಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು