4:41 AM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ

11/01/2025, 00:00

ನವದೆಹಲಿ(reporterkarnataka.com): ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರದ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು.


ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ನಡೆದ ಈ ಸಭೆಯಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ ಅಧ್ಯಕ್ಷ ಅಮಿತವ್ ಮುಖರ್ಜಿ, ಕಾನೂನು ಸಚಿವಾಲಯದ ಅಧಿಕಾರಿಗಳು ಹಾಗೂ ಹಲವು ಗಣಿ ಕಂಪನಿಗಳ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಪರಿಣಾಮ ದೇಶಿಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಒಟ್ಟಾರೆ ಸಾಧಕ ಬಾಧಕಗಳ ಬಗ್ಗೆ ಸಚಿವ ಮೇಘವಾಲ್ ಅವರೊಂದಿಗೆ ಮಾಹಿತಿ ಹಂಚಿಕೊಂಡರು.
ಸಭೆಯಲ್ಲಿ ಕೇಂದ್ರದ ಉಕ್ಕು ಸಚಿವರು ಹಲವು ಮಹತ್ವದ ಅಂಶಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. 2047ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಾಕಾರ ಮಾಡುವ ಗುರಿ ಹೊಂದಿದ್ದಾರೆ. ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿಗಳು ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತಿದ್ದಾರೆ.
ಮುಖ್ಯವಾಗಿ 2030ನೇ ವರ್ಷದ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿಯನ್ನು ನಿಗದಿ ಮಾಡಿದ್ದಾರೆ. ಇಂಥ ಮಹತ್ವಾಕಾಂಕ್ಷೆ ಗುರಿಗಳು ನಮ್ಮ ಮುಂದೆ ಇರುವಾಗ ಗಣಿ ಮತ್ತು ಉಕ್ಕು ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಸಚಿವರು ಹೇಳಿದರು.
ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿದ ಸಚಿವ ಮೇಘವಾಲ್ ಅವರು, ಪ್ರಧಾನಿಗಳ ಕನಸು ನನಸು ಮಾಡಬೇಕಾದರೆ ನಾವು ಒಮ್ಮತ ಹೆಜ್ಜೆಗಳನ್ನು ಇಟ್ಟು ಕ್ರಮ ವಹಿಸಬೇಕಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು