7:24 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಗಂಜಿ ಕಾಮಗಾರಿಗೆ 38. 82 ಕೋಟಿ ಸಾಲ: ಪಾಲಿಕೆ ಆಡಳಿತ ವಿರುದ್ಧ ಮಾಜಿ ಶಾಸಕ ಜೆ. ಆರ್. ಲೋಬೋ ಆಕ್ರೋಶ

09/01/2023, 17:59

ಮಂಗಳೂರು(reporterkarnataka.com): ಮಹಾನಗರ ಪಾಲಿಕೆ ಆಡಳಿತ ತನ್ನ 60 ವಾರ್ಡ್ ಗಳಲ್ಲಿ ಗಂಜಿ ಕಾಮಗಾರಿಗಳನ್ನು ಮಾಡುವುದಕ್ಕೆ 38. 82 ಕೋಟಿ ರೂಪಾಯಿ ಸಾಲ ಮಾಡಿರುವ ಕುರಿತು ಮಾಜಿ ಶಾಸಕ ಜೆ. ಆರ್. ಲೋಬೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಲಿಕೆ ಆಡಳಿತ ದಿಕ್ಕುತಪ್ಪುತ್ತಿರುವುದಕ್ಕೆ ಇದೊಂದು ಜೀವಂತ ನಿದರ್ಶನ ಎಂದಿದ್ದಾರೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಯ ಈ ಜನವಿರೋಧಿ ಆಡಳಿತವನ್ನು ತೀವ್ರವಾಗಿ ಖಂಡಿಸಲಾಗುತ್ತದೆ. ಡಂಬಲ್ ಎಂಜಿನ್ ಸರ್ಕಾರದಿಂದ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿ ಎಂದು ಒತ್ತಾಯಿಸಿದರು.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದಿಂದ (ಕೆಯುಐಡಿಎಫ್‌ಸಿ) ಸಣ್ಣಪುಟ್ಟ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮೊದಲು ಪಾಲಿಕೆಗೆ ವಿವಿಧ ಮೂಲಗಳ ಮೂಲಕ ಬರುವ ಆದಾಯದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು. ಫುಟ್‌ಪಾತ್‌, ಒಳಚರಂಡಿಗಳು ಮತ್ತು ತಡೆಗೋಡೆಗಳಂತಹ ಸಣ್ಣ ಗಂಜಿ ಕಾಮಗಾರಿಗಳನ್ನು ಸಾಲ ಪಡೆದು ಮಾಡುವ ಬದಲು ಪಾಲಿಕೆಯ ಆಂತರಿಕ ನಿಧಿಯನ್ನು ಬಳಸಿ ನಿರ್ಮಿಸಬೇಕು. ದೀರ್ಘಾವಧಿಯಲ್ಲಿ ಪಾಲಿಕೆಗೆ ಆದಾಯವನ್ನು ತರಲು ಸಹಾಯ ಮಾಡುವ ಆಸ್ತಿ ಸೃಷ್ಟಿಗೆ ಸಹಾಯ ಮಾಡುವ ಕೆಲಸಗಳನ್ನು ಕೈಗೊಳ್ಳಲು ಸಾಲ ಪಡೆಯಬೇಕು ಎಂದರು.
ಕೆಯುಐಡಿಎಫ್‌ಸಿಯಿಂದ ಸಾಲ ಪಡೆವ ಮಹಾನಗರ ಪಾಲಿಕೆಯ ಅವೈಜ್ಞಾನಿಕ ನಿರ್ಧಾರ ಕಾನೂನು ಉಲ್ಲಂಘನೆ ಆಗಿದೆ. ಕೆಯುಐಡಿಎಫ್‌ಸಿಯು ಆಸ್ತಿ ಸೃಷ್ಟಿ ಯೋಜನೆಗಳಿಗೆ ಮಾತ್ರ ಸಾಲವನ್ನು ಮಂಜೂರು ಮಾಡಬಹುದು. ಸಣ್ಣಪುಟ್ಟ ಕೆಲಸಗಳಿಗೆ ಸಾಲ ಪಡೆದರೆ ಸ್ಥಳೀಯ ಸಂಸ್ಥೆಯ ಆರ್ಥಿಕ ಸ್ಥಿತಿ ದಿಕ್ಕು ತಪ್ಪುತ್ತದೆ ಎಂದು ಹೇಳಿದರು.
ಪಾಲಿಕೆಯ ಕೌನ್ಸಿಲ್‌ನಲ್ಲಿ ಬಿಜೆಪಿ ಆಡಳಿತ ಪಕ್ಷವೂ ಸ್ಥಳೀಯ ಸಂಸ್ಥೆಯ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಬೇಕು. ಪ್ರತಿಪಕ್ಷಗಳ ಬೇಡಿಕೆಗಳಿಗೆ ಸ್ಪಂದಿಸಲು ಪಾಲಿಕೆ ನಿರಾಕರಿಸುತ್ತಿರುವುದು ಏಕೆ ಎಂದು ಪ್ರಶ್ನೆ ಮಾಡಿದರು.

ನಗರದಲ್ಲಿ ಆಸ್ತಿ ತೆರಿಗೆಯನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸುವ ಮೂಲಕ ಮತ್ತು ನಿಯಮಾವಳಿ ಉಲ್ಲಂಘಿಸಿದ ಕಟ್ಟಡಗಳಿಂದ ದುಪ್ಪಟ್ಟು ತೆರಿಗೆ ಸಂಗ್ರಹಿಸುವ ಮೂಲಕ ಪಾಲಿಕೆ ತನ್ನ ಆದಾಯ ಸಂಗ್ರಹವನ್ನು ಹೆಚ್ಚಿಸಬಹುದು. ಆದಾಯ ಸಂಗ್ರಹದಲ್ಲಿನ ಸೋರಿಕೆಯನ್ನು ಕಂಡು ಹಿಡಿಯುವ ಕೆಲಸವನ್ನು ಪಾಲಿಕೆ ಮಾಡಬೇಕು ಎಂದರು ಒತ್ತಾಯಿಸಿದರು.
ಪಾಲಿಕೆ ಪ್ರತಿಪಕ್ಷದ ನಾಯಕ ನವೀನ್ ಡಿಸೋಜ, ಶಶಿಧರ ಹೆಗ್ಡೆ, ವಿಶ್ವಾಸ್ ಕುಮಾರ್ ದಾಸ್, ಭಾಸ್ಕರ್ ಮೊಯ್ಲಿ, ಟಿ.ಕೆ. ಸುಧೀರ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು