11:52 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಗ್ಯಾರೆಂಟಿ ಯೋಜನೆಗಳು ಬಡವರ ಪಾಲಿಗೆ ಸಹಕಾರಿ: ಸಚಿವ ದಿನೇಶ್ ಗುಂಡೂರಾವ್

16/01/2025, 18:55

ಬೆಂಗಳೂರು(reporterkarnataka.com): ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಶಾಸಕರ ಕಚೇರಿಯಲ್ಲಿ ಸ್ಥಳೀಯ ಶಾಸಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಸಭೆ ಜರುಗಿತು.
ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಮೇಶ್ ಬಾಬು, ಆಹಾರ ಇಲಾಖೆ ಉಪನಿರ್ದೇಶಕಿ ಸೌಮ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕುಟುಂಬ ಇಲಾಖೆ, ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ ಮತ್ತು ಬಿಟಿಎಸ್, ಕ್ರೀಡಾ ಮತ್ತು ಯುವ ಜನ ಸಬಲೀಕರಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಚಿವ ದಿನೇಶ್ ಗುಂಡೂರಾವ್* ಮಾತನಾಡಿ, ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳು ವೇಗವಾಗಿ ಜನರಿಗೆ ತಲುಪಿದೆ. ಯೋಜನೆಯ ಲಾಭ ಎಷ್ಟು ಜನರಿಗೆ ಸದುಪಯೋಗ ವಾಗುತ್ತಿದೆ ಮತ್ತು ಇದರಲ್ಲಿ ಬಡವರು, ಮಧ್ಯಮವರ್ಗದವರು ಎಷ್ಟು ಜನರು ಇದ್ದಾರೆ ಎಂದು ಪರಿಶೀಲನೆ ಮಾಡಬೇಕು.
ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಯೋಜನೆಯ ಲಾಭ ಸಾವಿರಾರು ಕುಟುಂಬಗಳಿಗೆ ಯೋಜನೆ ಲಾಭ ತಲುಪಿದೆ ಎಂದರು.
ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಸ್ಲಂ ಪ್ರದೇಶದ ವಾಸ ಮಾಡುವ ಕಡೆಗಳಲ್ಲಿ ಗೃಹಜ್ಯೋತಿ ಯೋಜನೆ ಬಳಕೆದಾರರು ಶೇಕಡ 90%ರಷ್ಟು ಇದ್ದಾರೆ.
ಆಹಾರ ಇಲಾಖೆಯಿಂದ ಬಡವರ ಮನೆಗಳಿಗೆ ಖುದ್ದಾಗಿ ಪರಿಶೀಲನೆ ಮಾಡಿ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದೆ ಇದರಿಂದ ದುರುಪಯೋಗ ಕಡಿಮೆಯಾಗುತ್ತಿದೆ.
ಹಸಿವಿನಿಂದ ಯಾರು ಮಲಗಬಾರದು ಎಂದು ಸರ್ಕಾರ ಅನ್ನಭಾಗ್ಯ ಯೋಜನೆ ಬಡವರ ಪಾಲಿಗೆ ಅಕ್ಷಯಪಾತ್ರೆಯಾಗಿದೆ.
ಯುವತಿಯರು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮಿ ಯೋಜನೆಯಿಂದ ಸ್ವಾವಲಂಬಿ ಬದುಕು ಸಾಗಿಸಲು ಅನುಕೂಲವಾಗಿದೆ.


ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರು, ಸಮಿತಿಯ ಸದಸ್ಯರುಗಳು ಪ್ರತಿ ಮನೆಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಹೊಸ ಫಲಾನುಭವಿಗಳಿಗೆ ಗುರುತಿಸಿ ಯೋಜನೆ ಲಾಭ ತಲುಪುವಂತೆ ಮತ್ತು ಫಲಾನುಭವಿಗಳಿಗೆ ಸರಿಯಾಗಿ ಯೋಜನೆ ಲಾಭ ತಲುಪುತಿದ್ದಿಯ ಎಂದು ಪರಿಶೀಲನೆ ಮಾಡಲಿದ್ದಾರೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳಾದ ಶ್ರೀನಿವಾಸಮೂರ್ತಿ, ಸರವಣನ್, ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ಓಂಪ್ರಕಾಶ್, ಭಾಗಲಕ್ಷ್ಮಿ, ಅಮರ್ ನಾಥ್ ವಿ., ಮತ್ತು ಕುಮಾರಿ,ಮಾಧುರಿ, ಸೈಯದ್, ಸಲಾವುದ್ದೀನ್, ಮಹೇಶ್ ಜಿ, ದೀಪ, ರೇಖಾ, ಶೇಖರ್, ದರ್ಶನ್ ನಟರಾಜ್, ಮಹೇಶ್ವರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು