4:34 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಗ್ಯಾಸ್ ಪೈಪ್‌ಲೈನ್ ಲೀಕ್ ಆಗಿ ಬೆಂಕಿ: ತಪ್ಪಿದ ಭಾರೀ ದುರಂತ; ಎಫ್‌ಐಆರ್‌ ದಾಖಲಿಸಲು ಒತ್ತಾಯ

05/05/2026, 15:27

ಬೀದರ್(reporterkarnaraka.com): ಬೀದರ್ ನಗರದ ಜೈಲ್ ಕಾಲನಿಯಲ್ಲಿ ಗ್ಯಾಸ್ ಪೈಪ್‌ ಲೀಕ್ ಆಗಿ ಆಳೆತ್ತರಕ್ಕೆ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಭಾರೀ ಅನಾಹುತ ತಪ್ಪಿದ್ದು, ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಯಿತು.
ಜೈಲ್ ಕಾಲನಿ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದು, ಹೆಲ್ಪ್ ಲೈನ್ ಕೆಲಸ ಮಾಡುತ್ತಿಲ್ಲ ಎಂದು ಸಿಬಂದಿಗಳನ್ನು ತರಾಟೆಗೆ ತೆಗದುಕೊಂಡರು. ಅಗ್ನಿ ಶಾಮಕ ಸಿಬಂದಿಗಳು ಸಕಾಲಕ್ಕೆ ಆಗಮಿಸಿ ಬೆಂಕಿ ನಂದಿಸದೇ ಹೋಗಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎಂದು ಆರೋಪಿಸಿ ಗ್ಯಾಸ್‌ ಕಂಪನಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಒತ್ತಾಯ ಮಾಡಿದ್ದಾರೆ.

ಅಗ್ನಿ ಶಾಮಕ ಸಿಬಂದಿಗಳು ಬೆಂಕಿ ನಂದಿಸಿದರೂ ಗ್ಯಾಸ್‌ ಲೀಕ್ ತಡೆಗಟ್ಟಲು ಹರಸಾಹಸ ಪಡಬೇಕಾಯಿತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು