ಇತ್ತೀಚಿನ ಸುದ್ದಿ
ಗ್ಯಾಸ್ ಸ್ಫೋಟದಿಂದ ಗಾಯಗೊಂಡ ತಾಯಿ-ಮಕ್ಕಳಿಗೆ ಸೂಕ್ತ ಚಿಕಿತ್ಸೆಗೆ ಸ್ಪೀಕರ್ ಖಾದರ್ ಸೂಚನೆ
09/12/2024, 00:03

ಮಂಗಳೂರು(reporterkarnataka.com): ಗ್ಯಾಸ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡ ಘಟನೆ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ ನಡೆದಿದ್ದು,ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.
ಈ ಬಗ್ಗೆ ವಿವರ ತಿಳಿದು ಆಸ್ಪತ್ರೆಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಭಾಧ್ಯಕ್ಷ ಯು ಟಿ ಖಾದರ್, ವೈದ್ಯರೊಂದಿಗೆ ಮಾತುಕತೆ ನಡೆಸಿ ಸೂಕ್ತ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳೊಂದಿಗೂ ಮಾತುಕತೆ ನಡೆಸಿದ ಯು ಟಿ ಖಾದರ್, ಸೂಕ್ತ ತನಿಖೆ ನಡೆಸಿ ಗ್ಯಾಸ್ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.