ಇತ್ತೀಚಿನ ಸುದ್ದಿ
ಭಾರತ ಕ್ರಿಕೆಟ್ ತಂಡದ ನೂತನ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ
09/07/2024, 21:06
ರಾಹುಲ್ ದ್ರಾವಿಡ್ ಅವರಿಂದ ತೆರವಾಗಿದ್ದ ಭಾರತ ಕ್ರಿಕೆಟ್ ತಂಡದ ಮುಖ್ಯಕೋಚ್ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಧಿಕೃತವಾಗಿ ನೇಮಕಗೊಂಡಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಘೋಷಣೆ ಮಾಡಿದ್ದಾರೆ. ಗೌತಮ್ ಗಂಭೀರ್ ಜುಲೈ ತಿಂಗಳ ಅಂತ್ಯದಲ್ಲಿ ಶ್ರೀಲಂಕಾ ಪ್ರವಾಸದ ಸಂದರ್ಭ ಅಧಿಕಾರ ಸ್ವೀಕರಿಸಲಿದ್ದಾರೆ.
2024ರ ಟಿ20 ವಿಶ್ವಕಪ್ ಟೂರ್ನಿಯ ಚಾಂಪಿಯನ್ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರವಧಿ ಜೂನ್ 29ಕ್ಕೆ ಮುಕ್ತಾಯಗೊಂಡಿತು. ಅದಕ್ಕೂ ಮುನ್ನವೇ ಗಂಭೀರ್ ಭಾರತದ ಹೆಡ್ಕೋಚ್ ಆಗುವ ವದಂತಿಗಳು ಹರಡಿದ್ದವು.