ಇತ್ತೀಚಿನ ಸುದ್ದಿ
GBA | ಬೆಂಗಳೂರಿಗೆ ಭಾರಿ ಮಳೆಯಿಂದ ಹಾನಿ: ವಾರ್ ರೂಮ್‌ನಲ್ಲಿ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ
19/05/2025, 21:09

ಬೆಂಗಳೂರು(reporterkarnataka.com):
ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರೇಟರ್ ಬೆಂಗಳೂರು ಅಥಾರಿಟಿ ಆದ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್‌ನಲ್ಲಿ ಮಾಹಿತಿ ಪಡೆದು, ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದರು.
ಹಾನಿಗೆ ಒಳಗಾಗಿರುವ ಪ್ರದೇಶಗಳ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿ ಅಗತ್ಯ ಕ್ರಮಗಳನ್ನು ಸರೋಪಾದಿಯಲ್ಲಿ ಕೈಗೊಳ್ಳುವಂತೆ ಸೂಚಿಸಿದರು.
ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ಎನ್.ಎ.ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್, ಪರಿಷತ್ ಸದಸ್ಯರಾದ ಸೀತಾರಾಮ್, ಸುಧಾಮ್‌ದಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.