4:27 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಗೆಳೆಯರ ನಿರ್ಲಕ್ಷ್ಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

14/09/2023, 10:33

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಂ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಹೊರವಲಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಪರಿಣಾಮ ಗಾಯಗೊಂಡಿದ್ದ ಹಾರೂಗೇರಿ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸಿ
ಪ್ರಶಾಂತ್ ಕನ್ನೇಶ ಸೇಡಬಾಳೆ (25) ಸಾವನ್ನಪ್ಪಿದ ಯುವಕ.
ಮೊಳೆ ಗ್ರಾಮದ ಜಾತ್ರೆ ಮುಗಿಸಿಕೊಂಡು ಹಾರೂಗೇರಿಗೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು ಕುಡಿದ ಅಮಲಿನಲ್ಲಿ ಬೈಕ್ ಸ್ಕಿಡ್ ಆಗಿ ಮೊಳೆ ತಂಗಡಿ ರಸ್ತೆ ಮಧ್ಯೆ ಅಪಘಾತಕ್ಕೆ ಒಳಗಾಗಿತ್ತು. ಅಪಘಾತ ಸಂಭವಿಸಿದ ನಂತರ ಸ್ನೇಹಿತರು ಗಾಯಾಳುವನ್ನು ಅಥಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯ ವೈದ್ಯರು ಪ್ರಥಮ ಚಿಕಿತ್ಸೆ ನಂತರ ಸ್ಕ್ಯಾನಿಂಗ್ ಮಾಡಲು ತಿಳಿಸಿದ್ದಾರೆ. ಆದರೆ ಕುಡಿದ ಅಮಲಿನಲ್ಲಿದ್ದ ಗೆಳೆಯರು ಪ್ರಶಾಂತ್ ಗೆ ಏನು ಆಗಿಲ್ಲ ಎಂದು ಹೇಳಿ ಕೆಂಪವಾಡ ಬಳಿ ರಾತ್ರಿ ಬಿಟ್ಟು ಹೋಗಿದ್ದಾರೆ.
ರಾತ್ರಿ ಇಡಿ ತೀವ್ರ ರಕ್ತಸ್ರಾವದಿಂದ ಪ್ರಶಾಂತ ಸಾವು ಸಂಭವಿಸಿದೆ ಸುದ್ದಿ ತಿಳಿದ ಕಾಗವಾಡ ಪಿಎಸ್ಐ ಹಣಮಂತ ನೇರಳೆ ಸಿಪಿಐ ರವೀಂದ್ರ ನಾಯ್ಕೋಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು