10:57 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಗೆಲ್ಲಲ್ಲೇ ಬೇಕು ಇವರು: ನೈಋತ್ಯ ಪದವೀಧರ ಕ್ಷೇತ್ರದ ದಕ್ಷ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್

01/06/2024, 14:47

ಶಿವಮೊಗ್ಗ(reporterkarnataka.com): ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಅನುಭವಿ, ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿಕೂಟದಿಂದ ಕಣಕ್ಕಿಳಿದಿರುವ ಡಾ.ಧನಂಜಯ ಸರ್ಜಿ ನಡುವೆ ನೇರ ಹಣಾಹಣಿ ಏರ್ಪಪಟ್ಟಿದೆ.

ನೈಋತ್ಯ ಪದವೀಧರ ಕ್ಷೇತ್ರವು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ದಾವಣಗೆರೆ ಜಿಲ್ಲೆಯ ಚನ್ನಗಿರಿ, ನ್ಯಾಮತಿ, ಹೊನ್ನಾಳಿ (30 ವಿಧಾನಸಭಾ, 5 ಲೋಕಸಭಾ ಕ್ಷೇತ್ರ) ವ್ಯಾಪ್ತಿಯನ್ನು ಒಳಗೊಂಡಿರುವ ವಿಶಾಲ ಕ್ಷೇತ್ರ. ಈ ಬಾರಿ 11 ಮಂದಿ ಕಣದಲ್ಲಿದ್ದಾರೆ. ‘ಹಳೇ ಹುಲಿ’ ಆಯನೂರು ಮಂಜುನಾಥ್ ಪ್ರಬಲ ಅಭ್ಯರ್ಥಿಯಾಗಿದ್ದು, ಇವರ ಮಣಿಸಲು ಎನ್ ಡಿಎ ಮೈತ್ರಿಕೂಟ ನಾನಾ ಕಸರತ್ತು ನಡೆಸುತ್ತಿದೆ. ಆಯನೂರು ಮಂಜುನಾಥ ಅವರು ಈ ಹಿಂದೆ ಲೋಕಸಭಾ ಸದಸ್ಯ, ಶಾಸಕ, ವಿಧಾನ ಪರಿಷತ್ ಸದಸ್ಯ ಮತ್ತು ರಾಜ್ಯಸಭಾ ಸದಸ್ಯರಾಗಿ ದೀರ್ಘಕಾಲ ಸೇವೆ ಸಲ್ಲಿಸಿದವರು. ತನ್ನ ಅಧಿಕಾರವಧಿಯಲ್ಲಿ ಯಾವ ಉದ್ದಿಮೆಯನ್ನೂ ನಡೆಸದ ಓರ್ವ ಅಪರೂಪದ ರಾಜಕಾರಣಿ. ಗ್ರಾಮೀಣ ಹಿನ್ನೆಲೆಯಿಂದ ಬಂದ ಆಯನೂರು ಮಂಜುನಾಥ್ ಅವರದ್ದು ಸುಮಾರು 47 ವರ್ಷಗಳಿಗೂ ಮಿಕ್ಕ ಅವಿರತ ಹೋರಾಟದ ಬದುಕು. ಅವರು ಕಾರ್ಮಿಕ ಸಂಘಟನೆಯ ಮುಖಂಡನಾಗಿ ಬೆಳೆದು ಬಂದವರು. ಈಗಲೂ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು ಎಂದು ದೊಡ್ಡಮಟ್ಟದಲ್ಲಿ ಹೋರಾಡುತ್ತಿದ್ದಾರೆ.
ಲೋಕಸಭಾ ರಾಜ್ಯಸಭಾ ಸದಸ್ಯ ಅವಧಿಯಲ್ಲಿ ಆಯನೂರು ಮಂಜುನಾಥ ಅವರು ಆಹಾರ ನಿಗಮದ ಅಧ್ಯಕ್ಷ, ಪ್ರವಾಸೋದ್ಯಮ, ಸಾರಿಗೆ, ಕೇಂದ್ರದ ಕಾರ್ಮಿಕ ನೌಕರರಿಗೆ ಸಂಬಂಧಪಟ್ಟ ತ್ರಿಪಕ್ಷೀಯ ಸಮಿತಿ ಸದಸ್ಯನಾಗಿ ಕಾರ್ಯನಿರ್ವಹಿಸಿ, ಆಯಾ ಕ್ಷೇತ್ರಗಳ ಪರಿಣಿತರಿಂದ ಮೆಚ್ಚುಗೆ ಸಂಪಾದಿಸಿದ್ದಾರೆ.
ಕಳೆದ ಅವಧಿಯಲ್ಲಿ ಇದೇ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಮೇಲ್ಮನೆಗೆ ಆಯ್ಕೆಯಾಗಿದ್ದ ಆಯನೂರು ಮಂಜುನಾಥ ಅವರು ಬದಲಾದ ರಾಜಕೀಯ ಸನ್ನಿವೇಶದಲ್ಲಿ ಈ ಬಾರಿ ಕಾಂಗ್ರೆಸ್ ಹುರಿಯಾಳು. ಮತದಾರರು ಈ ಬಾರಿಯೂ ತಮ್ಮನ್ನು ‘ಕೈ’ ಬಿಡುವುದಿಲ್ಲ ಎಂಬ ಭರವಸೆಯಲ್ಲಿರುವ ಅವರು ಕ್ಷೇತ್ರದ ಆರು ಜಿಲ್ಲೆಗಳಲ್ಲಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು