9:20 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮೈಸೂರು ದಸರೆಗೆ ಬಲೂನ್ ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರ ಎಸಗಿ ಕೊಲೆ: ಆರೋಪಿ ಕೀಚಕನ ಕಾಲಿಗೆ ಪೊಲೀಸ್ ಗುಂಡು

10/10/2025, 11:18

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮೈಸೂರಿನಲ್ಲಿ ನಡೆದ ಬಾಲಕಿಯೋರ್ವಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಅಲೆಮಾರಿ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿ ತದನಂತರ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿದ್ದಾರೆ.
ಹೊಟ್ಟೆಪಾಡಿಗಾಗಿ ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು. ಆದ್ರೆ, ಮೊನ್ನೆ ರಾತ್ರಿ ಟೆಂಟ್ ನಲ್ಲಿ ಮಲಗಿದ್ದ 10 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದ. ಸದ್ಯ ಸಿಸಿಟಿವಿ ಆಧಾರದ ಮೇಲೆ ಹಂತಕ ಕಾರ್ತಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಕೃತ್ಯ ಎಸಗಿ ಮೈಸೂರು ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಇನ್ನು ಮೇಟಗಳ್ಳಿ ಬಳಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಹೀಗಾಗಿ ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ತಕ್ಷಣವೇ ಬಂಧಿಸಿದ ಪೊಲೀಸರು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

*ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ:*
ಕೊಳ್ಳೇಗಾಲದಲ್ಲಿ ಸಿಕ್ಕ ಕಾರ್ತಿಕ್​ ಮೇಟಗಳ್ಳಿ ಬಳಿ ಕಾನ್ಸ್‌ಟೇಬಲ್ ವೆಂಕಟೇಶ್‌ ರವರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದಾನೆ. ಈ ವೇಳೆ ಸಬ್ ಇನ್ಸ್‌ಪೆಕ್ಟರ್‌ ಜೈಕೀರ್ತಿ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.. ಸದ್ಯ ಆರೋಪಿ ಕಾರ್ತಿಕ್‌ ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆಸ್ಪತ್ರೆಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

*ಕಠಿಣ ಕ್ರಮಕ್ಕೆ ಆಗ್ರಹ:*
ಹೊಟ್ಟೆ ಪಾಡಿಗಾಗಿ ದೂರ ಊರಿನಿಂದ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದ ಕಾರ್ತಿಕ್ ಅರೆಸ್ಟ್ ಆಗುತ್ತಿದ್ದಂತೆ ಹಲವರು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಗಲ್ಲು ಶಿಕ್ಷೆಗೆ ಗುರಿಪಡಿಸುವಂತೆ ಕೆಲವರು ಒತ್ತಾಯಿಸಿದ್ದರೆ, ಇನ್ನು ಕೆಲವರು ಎನ್‌ಕೌಂಟರ್ ಮಾಡೇಕೆಂದು ಆಗ್ರಹಿಸಿದ್ದಾರೆ.

*ಯಾರು ಈ ಕೀಚಕ ಕಾರ್ತಿಕ್:?*
ಮೈಸೂರಿನ ಸಿದ್ದಲಿಂಗಪುರ ನಿವಾಸಿಯಾಗಿರುವ ಕಾರ್ತಿಕ್, ಮಂಡ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ. ಇನ್ನು ಈ ಪ್ರಕರಣದಲ್ಲಿ 2 ವರ್ಷ ಜೈಲಿನಲ್ಲಿದ್ದು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಆದ್ರೆ, ಊರಿಗೆ ಹೋಗದೆ ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆಯುತ್ತಿದ್ದ. ಮದ್ಯ ವ್ಯಸನಿ ಕಾರ್ತಿಕ್ ಕಣ್ಣಿಗೆ 10 ವರ್ಷದ ಬಾಲಕಿ ಬಿದ್ದಿದ್ದು, ಆಕೆಯನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ.
ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು ಕುಟುಂಬ ಬಂದಿವೆ. ಇವರು ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು. ಆದ್ರೆ, ಹಿಂದಿನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಆದ್ರೆ, ಬೆಳಗ್ಗೆ ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ನಿನ್ನೆ ಬೆಳಗ್ಗೆ 6:30ರ ಸುಮಾರಿಗೆ ಜೋಪಡಿಯ ಪಕ್ಕದ ಗುಂಡಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಶವದ ಮೇಲೆ ಸರಿಯಾಗಿ ಬಟ್ಟೆಯಿರಲಿಲ್ಲ, ಇದರಿಂದ ಕುಟುಂಬಸ್ಥರು ಅತ್ಯಾಚಾರ ಮತ್ತು ಕೊಲೆಯ ಶಂಕೆ ವ್ಯಕ್ತಪಡಿಸಿದ್ದರು. ಬಳಿಕ ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿದ ಬಳಿಕ ಕಾರ್ತಿಕ್ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು