3:41 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ ನಾಯಕ ಎನ್. ರವಿ ಕುಮಾರ್ ಆಗ್ರಹ

31/05/2025, 20:30

ಮಂಗಳೂರು(reporterkarnataka.com): ಮಳೆ ದುರಂತದಲ್ಲಿ ತನ್ನ ಎರಡು ಮಕ್ಕಳು ಹಾಗೂ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಮಂಜನಾಡಿ ಸಮೀಪದ ಮೊಂಟೆಪದವು ನಿವಾಸಿ ಅಶ್ವಿನಿ ಅವರಿಗೆ ಸರಕಾರಿ ನೌಕರಿ ನೀಡಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿ ಕುಮಾರ್ ಆಗ್ರಹಿಸಿದ್ದಾರೆ.

ಜಿಲ್ಲೆಯ ಗುಡ್ಡವಾರು ಪ್ರದೇಶಗಳಲ್ಲಿ ಅಪಾಯವನ್ನು ಸೂಚಿಸುವ ಮನೆಗಳನ್ನು ತಕ್ಷಣಕ್ಕೆ ಸ್ಥಳಾಂತರಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಮೊಂಟೆಪದವು ಪಂಬದಹಿತ್ತಿಲು ಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಾವನ್ನಪ್ಪಿದ ಅಜ್ಜಿ ಹಾಗೂ ಮೊಮ್ಮಕ್ಕಳಿಬ್ಬರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿ, ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶ್ವಿನಿ, ಮಾವ ಕಾಂತಪ್ಪ ಪೂಜಾರಿ ಅವರ ಆರೋಗ್ಯ ವಿಚಾರಣೆ ನಡೆಸಿ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಸರಕಾರದಿಂದ ನೊಂದ ಕುಟುಂಬಕ್ಕೆ ಸಹಕಾರ ಸಿಗಬೇಕಿದೆ. ಮಕ್ಕಳಿಬ್ಬರನ್ನು ಕಳೆದುಕೊಂಡ ತಾಯಿ ಕಾಲುಗಳನ್ನು ಕಳೆದುಕೊಂಡಿರುವುದು ಅತೀವ ದುಃಖವನ್ನುಂಟು ಮಾಡಿದೆ. ಮಳೆ ಅನಾಹುತದ ಮುನ್ನವೇ ಜಿಲ್ಲಾಡಳಿತ, ಸರಕಾರಗಳು ಜನರ ರಕ್ಷಣೆಯಲ್ಲಿ ಸನ್ನದ್ಧವಾಗಿರಬೇಕು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರವೇ ಚೇತರಿಸಿಕೊಳ್ಳಲಿ. ಜಿಲ್ಲಾಡಳಿತ ಎಲ್ಲಾ ರೀತಿಯ ಸಹಕಾರವನ್ನು ಕುಟುಂಬಕ್ಕೆ ಒದಗಿಸಬೇಕಿದೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮುಖಂಡ ಸಂತೋಷ್ ಕುಮಾರ್ ರೈ ಬೋಳಿಯಾರ್, ಕ್ಷೇತ್ರ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್, ಹೇಮಂತ್ ಶೆಟ್ಟಿ, ಸುರೇಶ್ ಆಳ್ವ ತಲಪಾಡಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು