4:20 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಪ್ರಕರಣ: ಇಬ್ಬರ ಬಂಧನ; 1.65 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶ

17/12/2025, 10:30

ಮಂಗಳೂರು(reporterkarnataka.com): ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಉಳ್ಳಾಲದ ನಿವಾಸಿ
ಪೈಸಲ್ ಅಲಿಯಾಸ್ ತೋಟ ಪೈಸಲ್ ಹಾಗೂ ಮೈಸೂರಿನ
ನಿತೀನ್  ಕುಮಾರ್ ಎಂದು ಗುರುತಿಸಲಾಗಿದೆ.
ಡಿ. 12ರಂದು ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ  ಯಮಹಾ  FZ   ಕಂಪನಿಯ  KA-19-ER-7755 ಮೋಟಾರ್ ಸೈಕಲ್ ನ್ನು ಕಳವು ಆದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಕದ್ರಿ ಅಪರಾಧ ವಿಭಾಗದ ಸಿಬ್ಬಂದಿಗಳಿಗೆ ದೊರೆತ ಖಚಿತ ಮಾಹಿತಿಯಂತೆ ಇಂದು ಪ್ರಕರಣದ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಈ ಆರೋಪಿಗಳು 13-12-2025 ರಂದು ಭಟ್ಕಳ ಗ್ರಾಮಿಣ ಪೊಲೀಸ್ ಠಾಣಾ ಸರಹದ್ದಿನ ಗರ್ಡಿ ಹಿತ್ಲು ಬೆಳಕೆ ಭಟ್ಕಳ ತಾಲೂಕಿನಲ್ಲಿ ವಯೋವೃದ್ದ ಮಹಿಳೆಯಾದ ಹೊನ್ನಮ್ಮ ಮಹಾದೇವ ನಾಯ್ಕ್ ಅವರ ಕುತ್ತಿಗೆಯಿಂದ ಚಿನ್ನದ ಚೈನ್ ನ್ನು ಕಸಿದುಕೊಂಡು ಪರಾರಿಯಾದ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಬಾಯಿ ಬಿಟ್ಟಿದ್ದು, ಆರೋಪಿಗಳಿಂದ ಚಿನ್ನದ ಸರ-1, ಇದರ ಅಂದಾಜು ಮೌಲ್ಯ ರೂ 1,20,000/- ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ಬೈಕ್-1 ಅಂದಾಜು ಮೌಲ್ಯ ರೂ  45,000/- ಸೊತ್ತನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಪೈಸಲ್ ಅಲಿಯಾಸ್ ತೋಟ ಪೈಸಲ್ ಈತನ ವಿರುದ್ದ ಉಡುಪಿ, ಕಾರ್ಕಳ, ಮಣಿಪಾಲ, ಮಂಗಳೂರು. ಬೆಳ್ತಂಗಡಿ, ವಿಟ್ಲ, ಕಂಕನಾಡಿ ನಗರ ಪೊಲೀಸ್ ಠಾಣೆ, ಪುತ್ತೂರು, ಶಿರ್ವ ಸುರತ್ಕಲ್, ಕಡಬ, ಕೊಣಾಜೆ, ಮಡಿಕೇರಿಯ ಕುಶಾಲ ನಗರ,  ಹಾಗೂ ಕೇರಳ ರಾಜ್ಯಗಳಲ್ಲಿ ರಾಬರಿ, ದರೋಡೆ, ಕಳ್ಳತನದ ಮತ್ತು ಕೊಲೆ ಪ್ರಕರಣ ಸೇರಿದಂತೆ  ಸುಮಾರು 42 ಪ್ರಕರಣಗಳು ದಾಖಲಾಗಿರುತ್ತದೆ. ಈತನ ವಿರುದ್ದ ವಿವಿಧ ನ್ಯಾಯಾಲಯಗಳಲ್ಲಿ 10 ಕ್ಕಿಂತಲೂ ಹೆಚ್ಚು ಜಾಮೀನು ರಹಿತ ವಾರೆಂಟ್ ಇದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆ ತಪ್ಪಿಸಿಕೊಂಡಿರುತ್ತಾನೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಅನಂತ ಪದ್ಮನಾಭ, ಪಿಎಸ್ಐ ಮನೋಹರ್ ಪ್ರಸಾದ್, ಎ.ಎಸ್.ಐ.ಗಳಾದ ಚಂದ್ರಶೇಖರ್, ಸುಧಾಕರ್ ರಾವ್, ರಾಜಶೇಖರ್, ಹೆಚ್.ಸಿ.ಗಳಾದ ಲೋಕೆಶ್, ಸಂತೋಷ್ ಡಿ.ಕೆ. ಸುರೇಶ್, ದಿಲೀಪ್, ಮೋಹನ್, ಮಲ್ಲಪ್ಪ ಬಿ. ಮತ್ತು ಪಿ.ಸಿ.ಗಳಾದ ಸುನೀಲ್, ಮಣಿಕಂಠ, ಮೌಲಾ ಅಹಮ್ಮದ್ ಮತ್ತು ಮಂಜುನಾಥ ವಡ್ಡರ ಹಾಗೂ ಕದ್ರಿ ಠಾಣೆಯ ಸಿಬ್ಬಂದಿ ವರ್ಗ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು