8:32 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್, ಫ್ಯಾನ್‍, ಏರ್ ಕೂಲರ್ !

11/03/2025, 22:54

ಬೆಂಗಳೂರು (reporterkarnataka.com) : ಹೆಚ್ಚುತ್ತಿರುವ ತಾಪಮಾನವು ಮೈಸೂರು ಮೃಗಾಲಯದಲ್ಲಿರುವ ಪ್ರಾಣಿಗಳ ಮೇಲೆ ಪರಿಣಾಮಗಳನ್ನು ಬೀರದಿರಲು ಹಲವು ಬೇಸಿಗೆ ನಿರ್ವಹಣಾ ಕ್ರಮಗಳನ್ನು ಮೈಸೂರು ಮೃಗಾಲಯದಲ್ಲಿ ಕೈಗೊಳ್ಳಲಾಗಿದೆ.
ಪ್ರಾಣಿ ಪಕ್ಷಿಗಳಿಗೆ ಉಂಟಾಗುವ ಶಾಖದ ಒತ್ತಡವನ್ನು ತಡೆಗಟ್ಟಲು ಮತ್ತು ತಂಪಾದ ವಾತಾವರಣವನ್ನು ನಿರ್ಮಿಸಲು ಎಲ್ಲಾ ಪ್ರಾಣಿ ಮನೆಗಳಲ್ಲಿ ನೀರಿನ ಜೆಟ್‍ಗಳು ಮತ್ತು ನೀರಿನ ಸಿಂಪರಣೆಗಳನ್ನು ಒದಗಿಸಲಾಗಿದೆ.
ರಾತ್ರಿಯಲ್ಲಿ ಒಳಾವರಣಗಳಲ್ಲಿ ಈ ಪ್ರಾಣಿಗಳು ಆರಾಮದಾಯಕ ಸ್ಥಿತಿಯಲ್ಲಿರಲು ಫ್ಯಾನ್‍ಗಳು ಮತ್ತು ಕೂಲರ್ ಗಳ ವ್ಯವಸ್ಥೆ ಯನ್ನು ಮಾಡಲಾಗಿರುತ್ತದೆ. ಹಿಮಾಲಯದ ಕಪ್ಪು ಕರಡಿಗಳಿಗೆ ಉಷ್ಣಾಂಶವನ್ನು ನಿಯಂತ್ರಿಸಲು ಸಹಾಯವಾಗುವಂತೆ ಆಹಾರವನ್ನು ಐಸ್‍ಬ್ಲಾಕ್ ರೀತಿಯಲ್ಲಿ ಒದಗಿಸಲಾಗುತ್ತಿದೆ.
ತಂಪಾದ ಆಹಾರ ಕ್ರಮವನ್ನು ಖಾತ್ರಿಪಡಿಸಲು ಎಲ್ಲಾ ಬಗೆಯ ವಾನರ ಜಾತಿಯ ಪ್ರಾಣಿಗಳಾದ ಗೊರಿಲ್ಲಾ, ಒರಾಂಗೂಟಾನ್, ಚಿಂಪಾಂಜಿ ಇತ್ಯಾದಿ ಪ್ರಾಣಿಗಳಿಗೆ ದಿನಕ್ಕೆ ಎರಡು ಬಾರಿ ತಾಜಾ ಎಳನೀರು ನೀರಿನಾಂಶವುಳ್ಳ ತರಕಾರಿ ಹಾಗೂ ಹಣ್ಣುಗಳಾದ ಕಲ್ಲಂಗಡಿ, ಸೌತೆಕಾಯಿ, ಕರಬೂಜ ಇತ್ಯಾದಿಗಳನ್ನು ಅವುಗಳ ಆಹಾರದಲ್ಲಿ ಹೆಚ್ಚಾಗಿ ಸೇರಿಸಿ ನೀಡಲಾಗುತ್ತಿದೆ ಹಾಗೂ ಓ.ಆರ್.ಎಸ್. ಅನ್ನು ಅವುಗಳ ಆಹಾರದಲ್ಲಿ ಬಳಸಲಾಗುತ್ತಿದೆ.
ಎಲ್ಲಾ ಬಗೆಯ ಸಸ್ಯಾಹಾರಿ ಪ್ರಾಣಿಮನೆಗಳಲ್ಲಿ ಕೆಸರಿನ ಕೊಳವನ್ನು ನಿರ್ಮಿಸುವ ಮೂಲಕ ಅವುಗಳಿಗೆ ನೈಸರ್ಗಿಕ ತಣ್ಣನೆಯ ವಾತಾವರಣವನ್ನು ಕಲ್ಪಿಸಲಾಗಿದೆ. ಪ್ರಾಣಿಗಳು ನೆರಳಿನಲ್ಲಿ ವಿಶ್ರಾಂತಿ ಪಡೆಯಲು ಅನುಕೂಲವಾಗುವಂತೆ ಎಲ್ಲಾ ಪ್ರಾಣಿಮನೆಗಳಲ್ಲಿ ಚಪ್ಪರ ಗಳನ್ನು ಒದಗಿಸಲಾಗಿದೆ.
ಪ್ರತಿ ಪ್ರಾಣಿಮನೆಗಳಲ್ಲಿರುವ ಉಷ್ಣಾಂಶವನ್ನು ತಿಳಿದುಕೊಳ್ಳಲು ಉಷ್ಣಮಾಪಕಗಳನ್ನು ಆಳವಡಿಸಲಾಗಿರುತ್ತದೆ. ಉಷ್ಣಮಾಪಕಗಳು ಏರುತ್ತಿರುವ ತಾಪಮಾನದಿಂದ ಮೃಗಾಲಯದೊಳಗಿರುವ ಎಲ್ಲಾ ಪ್ರಾಣಿಗಳಿಗೆ ಉಂಟಾಗುವ ಹಾನಿಯನ್ನು ತಪ್ಪಿಸಿ ರಕ್ಷಿಸಲು ಹಾಗೂ ಅವುಗಳನ್ನು ಕ್ಷೇಮವಾಗಿರಿಸಲು ಸಹಾಯವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು