10:45 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

Go Green | ಹಸಿರು ಫೌಂಡೇಶನ್ ಹಾಗೂ ಪರಿಸರ ಪ್ರೇಮಿಗಳಿಂದ ಸ್ವಚ್ಛತಾ ಅಭಿಯಾನ

03/03/2025, 15:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಹಸಿರು ಫೌಂಡೇಶನ್ (ರಿ) ವತಿಯಿಂದ ಮಾರ್ಚ್ 3, 2025 ಸೋಮವಾರ ಬೆಳಗ್ಗೆ 10.30ಕ್ಕೆ ಬಣಕಲ್ ಪೊಲೀಸ್ ಠಾಣೆ ಸರ್ಕಲ್ ನಿಂದ ಚಾರ್ಮಾಡಿ ವರೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಈ ಮಹತ್ವಾಕಾಂಕ್ಷಿ ಪರಿಸರ ಅಭಿಯಾನದಲ್ಲಿ 250ಕ್ಕೂ ಹೆಚ್ಚು ಸ್ವಯಂ ಸೇವಕರು ಭಾಗವಹಿಸಲಿದ್ದು, ಬಣಕಲ್ ಭಾಗದ ಸಾರ್ವಜನಿಕರು ಹಾಗೂ ಎಲ್ಲಾ ಪರಿಸರ ಪ್ರೇಮಿಗಳು ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಫೌಂಡೇಶನ್ ಅಧ್ಯಕ್ಷ ರತನ್ ಊರುಬಗೆ ಮನವಿ ಮಾಡಿದ್ದಾರೆ.
ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುವ ಸ್ವಯಂ ಸೇವಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ, ಅವರ ಆರೋಗ್ಯದ ಹಿತದೃಷ್ಟಿಯಿಂದ ಹ್ಯಾಂಡ್‌ಗ್ಲೌಸ್, ಮಾಸ್ಕ್ ವಿತರಣೆ ಹಾಗೂ ತುರ್ತು ವೈದ್ಯಕೀಯ ಸೇವೆಗಾಗಿ ತುರ್ತು ಚಿಕಿತ್ಸಾ ವಾಹನವನ್ನು ನಿಯೋಜಿಸಲಾಗಿದೆ.
ಪರಿಸರ ಸಂರಕ್ಷಣೆಗೆ ಇಂತಹ ಕಾರ್ಯಕ್ರಮಗಳು ಮಹತ್ವವನ್ನು ಹೊಂದಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಹಸಿರು ಫೌಂಡೇಶನ್ ತಂಡ ಕರೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು