9:37 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಗೋವಾ: 28ರಂದು ಬಿಜೆಪಿ ನೇತೃತ್ವದ ನೂತನ ಸರಕಾರ ಪ್ರತಿಜ್ಞೆ ಸ್ವೀಕಾರ: ಸಾವಂತ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ

24/03/2022, 09:19

ಪಣಜಿ(reporterkarnataka.com);

ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ ಪರಿಹಾರಗೊಂಡಿದ್ದು, ಮಾರ್ಚ್ 28ರಂದು ಪ್ರಮೋದ್ ಸಾವಂತ್ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಫಲಿತಾಂಶ ಬಂದು ಸುಮಾರು 15 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. 

ಗೋವಾದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಹಂಗಾಮಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮತ್ತು ಶಾಸಕ ವಿಶ್ವಜಿತ್ ರಾಭೆ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿತ್ತು. ಇದರಿಂದ ಸರಕಾರ ರಚನೆಗೆ ಹಿನ್ನಡೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸ್ಥಾಪನೆಗಾಗಿ ನೂತನ ಮುಖ್ಯಮಂತ್ರಿಗಳ ಆಯ್ಕೆಗೆ ಕೇಂದ್ರ ವೀಕ್ಷಕರಾದ ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್ ಮತ್ತು ಪಶುಸಂಗೋಪನಾ ಖಾತೆಯ ರಾಜ್ಯ ಸಚಿವ ಎಲ್.ಮುರುಗನ್ ಸೋಮವಾರ ಪಣಜಿಗೆ ಆಗಮಿಸಿದ್ದರು. ಕೇಂದ್ರ ವೀಕ್ಷಕರ ನೇತೃತ್ವದಲ್ಲಿ ಪಣಜಿಯಲ್ಲಿ ಬಿಜೆಪಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಬಿಜೆಪಿ ನಾಯಕರು ವಿಶ್ವಜಿತ್ ರಾಣೆ ಅವರ ಜತೆ ಮಾತುಕತೆ ನಡೆಸಿ ಅವರ ಅಸಮಾಧಾನ ಉಪಶಮನಕ್ಕೆ ಸೂತ್ರವೊಂದನ್ನು ಹಣೆದಿದ್ದರು. ಹಾಗೆ ಸಾವಂತ್  ಅವರನ್ನು ವಿಧಾನಸಭೆಯ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು