1:41 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಗೋವಾದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಕನಸು ಭಗ್ನ:ಅಧಿಕಾರದತ್ತ ಬಿಜೆಪಿ ಹೆಜ್ಜೆ; ಸಿಎಲ್ ಪಿ ಮೀಟಿಂಗ್ ರದ್ದು

10/03/2022, 12:23

ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಗೋವಾದಲ್ಲಿ ಸರಕಾರ ರಚಿಸುವ ಕಾಂಗ್ರೆಸ್ ಕನಸು ಭಗ್ನಗೊಂಡಿದೆ. ಈ ನಡುವೆ ಕಾಂಗ್ರೆಸ್ ಕರೆದಿದ್ದ ಸಿಎಲ್ ಪಿ ಸಭೆ ರದ್ದುಗೊಂಡಿದೆ.

ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದೆ. ಗೋವಾದಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ನ ಏಕೈಕ ಆಶಾಕಿರಣ ಕೂಡ ಇದೇ ಪುಟ್ಟ ರಾಜ್ಯವಾಗಿತ್ತು. ಆದರೆ ಇತ್ತೀಚಿಗಿನ ಫಲಿತಾಂಶ ಪ್ರಕಾರ ಗೋವಾದ 40 ಸ್ಥಾನಗಳ ಪೈಕಿ ಬಿಜೆಪಿ  20 ಸ್ಥಾನಗಳನ್ನು ಪಡೆದಿದೆ. ಒಬ್ಬರ ಬೆಂಬಲ ದೊರೆತರೆ ಬಿಜೆಪಿಗೆ ಇಲ್ಲಿ ಸರಳ ಬಹುಮತ ದೊರೆತಂತಾಗುತ್ತದೆ. ಗೋವಾದಲ್ಲಿ 3 ಮಂದಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಇವರ ಬೆಂಬಲ ಬಿಜೆಪಿಗೆ ಸಿಗುವ ಎಲ್ಲ ಸಾಧ್ಯತೆಗಳಿವೆ.

ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಮಣಿಪುರದಲ್ಲಿ ಸರಳ ಬಹುಮತ ಪಡೆದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು