8:31 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಗೋವಾ: ಬಿಜೆಪಿ ಆಂತರಿಕ ಬಿಕ್ಕಟ್ಟು ಕೊನೆಗೂ ಶಮನ; ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮೋದ ಸಾವಂತ್  ಆಯ್ಕೆ

22/03/2022, 16:15

ಪಣಜಿ(reporterkarnataka.com);

ಪಣಜಿ: ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ

ಪರಿಹಾರಗೊಂಡಿದೆ. ಫಲಿತಾಂಶ ಬಂದು ಸುಮಾರು 10 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. 

ಗೋವಾದ ಮುಖ್ಯಮಂತ್ರಿ ಸ್ಥಾನಕ್ಕಾಗಿ

ಹಂಗಾಮಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮತ್ತು ಶಾಸಕ ವಿಶ್ವಜಿತ್ ರಾಭೆ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿತ್ತು. ಇದರಿಂದ ಸರಕಾರ ರಚನೆಗೆ ಹಿನ್ನಡೆ ಉಂಟಾಗಿತ್ತು. ಇದರಿಂದ ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸ್ಥಾಪನೆಗಾಗಿ ನೂತನ ಮುಖ್ಯಮಂತ್ರಿಗಳ ಆಯ್ಕೆಗೆ ಕೇಂದ್ರ ವೀಕ್ಷಕರಾದ ಕೇಂದ್ರ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್ ಮತ್ತು ಪಶುಸಂಗೋಪನಾ ಖಾತೆಯ ರಾಜ್ಯ ಸಚಿವ ಎಲ್.ಮುರುಗನ್ ಸೋಮವಾರ

ಪಣಜಿಗೆ ಆಗಮಿಸಿದ್ದರು. ಇದೀಗ ಕೇಂದ್ರ ವೀಕ್ಷಕರ ನೇತೃತ್ವದಲ್ಲಿ ಪಣಜಿಯಲ್ಲಿ ಬಿಜೆಪಿ ಸಚಿವ ಸಂಪುಟ ಸಭೆ ನಡೆಸಲಾಯಿತು. ಬಿಜೆಪಿ ನಾಯಕರು ವಿಶ್ವಜಿತ್ ರಾಣೆ ಅವರ ಜತೆ ಮಾತುಕತೆ ನಡೆಸಿ

ಅವರ ಅಸಮಾಧಾನ ಉಪಶಮನಕ್ಕೆ ಸೂತ್ರವೊಂದನ್ನು ಹಣೆದಿದ್ದಾರೆ. ಹಾಗೆ

ಸಾವಂತ್  ಅವರನ್ನು ವಿಧಾನಸಭೆಯ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು