ಇತ್ತೀಚಿನ ಸುದ್ದಿ
ಗೋವಾ ವಿಧಾನಸಭೆ ಚುನಾವಣೆ: ಬಿಜೆಪಿ ಪರ ಶಾಸಕ ವೇದವ್ಯಾಸ ಕಾಮತ್ ಬಿರುಸಿನ ಪ್ರಚಾರ
12/02/2022, 18:41
ಪಣಜಿ(reporterkarnataka.com): ಗೋವಾ ವಿಧಾನಸಭಾ ಚುನಾವಣೆಯ ಪ್ರಯುಕ್ತ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಅಂತಿಮ ಹಂತದ ಪ್ರಚಾರ ನಡೆಸಿ ಪಣಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದರು.
ಈ ಕುರಿತು ಮಾತನಾಡಿದ ಶಾಸಕ ಕಾಮತ್, ಪಣಜಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಲಿದೆ. ಗೋವಾ ರಾಜ್ಯದಲ್ಲಿ ಅಭಿವೃದ್ಧಿಯ ಚಿಂತನೆಯಿಂದ ಆಡಳಿತ ನಡೆಸಿದ ಬಿಜೆಪಿಯ ವೈಖರಿಯನ್ನು ಜನತೆ ಮೆಚ್ಚಿಕೊಂಡಿದ್ದಾರೆ. ಸಮರ್ಥ ನಾಯಕತ್ವ, ಅಭಿವೃದ್ಧಿಯನ್ನು ಮುಂದಿಟ್ಟು ಗೋಲ್ಡನ್ ಗೋವಾ ನಿರ್ಮಾಣದ ಕನಸಿನೊಂದಿಗೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತಕ್ಕೇರಲಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಣಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಟಾನಾಸಿಯೊ ಮೊನ್ಸೆರಾಟೆ, ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್, ಮುಖಂಡರಾದ ಸಂಜಯ್ ಪ್ರಭು, ವಸಂತ್ ಜೆ ಪೂಜಾರಿ, ಪಣಜಿ ಕ್ಷೇತ್ರದ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.