10:07 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಗೋವಾದಲ್ಲಿ ಕಾರ್ಕಳದ ಯೋಗಪಟು ಕವನ ಆಚಾರ್ಯ ಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ

03/07/2023, 12:36

ಉಡುಪಿ(reporterkarnataka.com): ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಗೋವಾ ಜಿಲ್ಲಾ ಘಟಕ, ಸಾಲಸೇಟ ತಾಲೂಕಾ ಘಟಕ, ಹಾಗೂ ಸ್ನೇಹ ಯುವ ಸಾಂಸ್ಕೃತಿಕ ಸಂಘ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಮಡಗಾಂವ ಲಕ್ಷ್ಮೀ ಎಂಟರ್‍ಪ್ರೈಸಸ್ ಹೋಟೆಲ್‍ನಲ್ಲಿ ಆಯೋಜಿಸಿದ್ದ “ಕಲಾ ಸಂಗಮ ಗೋವಾ” ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಯೋಗಪಟು ಕವನ ಆಚಾರ್ಯ ಅವರಿಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ಕಸಾಪ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ, ಕರ್ನಾಟಕದ ಸಾರ್ವಜನಿಕ ಗೃಂಥಾಲಯ ಇಲಾಖೆಯ ನಿರ್ದೇಶಕ ಸತೀಶಕುಮಾರ ಹೊಸ್ಮನಿ, ಕಸಾಪ ಗೋವಾ ರಾಜ್ಯ ಗೌ.ಕಾರ್ಯದರ್ಶಿ ನಾಗರಾಜ ಗೋಂದಕರ್, ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಸಾಲಸೇಟ ತಾಲೂಕಾ ಅಧ್ಯಕ್ಷ ಬಸವರಾಜ ಬನ್ನಿಕೊಪ್ಪ, ಚಿತ್ರನಟಿ ಮೀನಾ, ಹಿರಿಯ ಪತ್ರಕರ್ತ ರಹಮತ್ ಕಂಚಗಾರ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಹಿರೀಯ ಪತ್ರಕರ್ತ ಮಾರುತಿ ಬಡಿಗೇರ, ಸ್ನೇಹಯುವ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ರಂಜಿತಕುಮಾರ್, ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು