ಇತ್ತೀಚಿನ ಸುದ್ದಿ
ಮೇಕೆದಾಟು | ರಾಜ್ಯ ಪರ ಮಹತ್ವದ ತೀರ್ಪು ಸರಕಾರಕ್ಕೆ ದೊರೆತ ಮಹತ್ವದ ಗೆಲುವು: ಪದ್ಮರಾಜ್ ಆರ್.ಪೂಜಾರಿ
15/11/2025, 10:27
ಮಂಗಳೂರು(reporterkarnataka.com): ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕದ ಪರವಾಗಿ ಮಹತ್ವದ ತೀರ್ಪು ಬಂದಿರುವುದು ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಸಿಕ್ಕಿದ ದೊಡ್ಡ ಗೆಲುವು ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್.ಪೂಜಾರಿ ಹೇಳಿದ್ದಾರೆ.
ಮೇಕೆದಾಟು ಯೋಜನೆ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕನಸ್ಸಾಗಿತ್ತು. ರಾಜ್ಯದ ಜನರ ಪ್ರಾರ್ಥನೆ, ಜನರ ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ. ಕರ್ನಾಟಕದ ಪಾಲಿಗೆ ಇದೊಂದು ಅಭೂತಪೂರ್ವ ಗೆಲುವಾಗಿದ್ದು, ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ. ಮಹತ್ವದ ಗೆಲುವಿಗೆ ಸಹಕರಿಸಿದ ಕರ್ನಾಟಕ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಕಾನೂನು ತಜ್ಞರ ತಂಡ, ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಪದ್ಮರಾಜ್ ತಿಳಿಸಿದ್ದಾರೆ.












