3:37 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಗೋಕುಲ ಮಂದಿರ ಬ್ರಹ್ಮಕಲಶೋತ್ಸವ ಸಮಾರೋಪ: ಕೇಂದ್ರ ವಿತ್ತ ಖಾತೆ ರಾಜ್ಯ ಸಚಿವ ಡಾ. ಭಗತ್ ಕಿಶನ್ ರಾವ್ ಕರಾಡ್ ಭೇಟಿ

19/05/2022, 08:49

ಮುಂಬಯಿ(reporterkarnataka.com): ಬಾಂಬ್ ಸೌತ್ ಕನರಾ ಬಾಗ್ಸ್ ಆಸೋಸಿಯೇಶನ್ ಮತ್ತು ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್‌ ಸಂಸ್ಥೆಗಳ ಪುನರಾಭಿವೃದ್ಧಿಯೊಂದಿಗೆ ನವೀಕೃತ ಗೋಕುಲ ಮಂದಿರಕ್ಕೆ ಕೇಂದ್ರ ವಿತ್ತ ಖಾತೆ ರಾಜ್ಯ ಸಚಿವ ಡಾ. ಭಗತ್ ಕಿಶನ್ ರಾವ್ ಕರಾಡ್ ಭೇಟಿಯನ್ನಿತ್ತು ಉತ್ಸವಕ್ಕೆ ಮೆರಗು ನೀಡಿದರು.


ಬಳಿಕ ಸಾಯನ್ ಕಿಂಗ್‌ಸರ್ಕಲ್‌ನ ಶ್ರೀ ಷಣ್ಮುಖಾನಂದ ಚಂದ್ರಶೇಖರೇಂದ್ರ ಸರಸ್ವತಿ ಸಭಾಗೃಹದಲ್ಲಿ ಬಿಎಸ್‌ಕೆಬಿ ಆಸೋಸಿಯೇಶನ್ ಮತ್ತು ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್‌ನ ಅಧ್ಯಕ್ಷ ಡಾ| ಸುರೇಶ್ ಎಸ್.ರಾವ್ ಕಟೀಲು ಅಧ್ಯಕ್ಷತೆಯಲ್ಲಿ ಜರುಗಿದ ಗೋಕುಲ ಬ್ರಹ್ಮಕಲಶೋತ್ಸವ ಸಮಾರೋಪ ಸಮಾರಂಭದ ಸಭಾಕಾರ್ಯಕ್ರಮಕ್ಕೆ ಸಚಿವ ಡಾ| ಭಗತ್‌ ರಾವ್‌ ಚಾಲನೆಯನ್ನಿತ್ತರು. ಉಡುಪಿ ಶ್ರೀ ಪಲಿಮಾರು ಮಠದ ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಶ್ರೀ ಕ್ಷೇತ್ರ ಕಟೀಲು ಇದರ ಆನುವಂಶಿಕ ಆರ್ಚಕ ವೇ ಮೂ ಆನಂತ ಪದ್ಮನಾಭ ಆಸ್ರಣ್ಣ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಂಡು ಅನುಗ್ರಹಿಸಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್.ಮಹಾಬಲೇಶ್ವರ ಭಟ್, ಅಜಂತಾ ಧಾರ್ಮ ಸಂಸ್ಥೆಯ ಉಪಾಧ್ಯಕ್ಷ ಮಧುಸೂದನ ಆಗರ್ವಾಲ್‌, ಚರೀಸ್ಮಾ ಬಿಲ್ಡರ್‌ನ ಕಾರ್ಯಾಧ್ಯಕ್ಷ ಮೂಲ್ಕಿ ಪಡುಮನೆ ಸುಧೀರ್‌ ವಿ.ಶೆಟ್ಟಿ, ಎಸ್‌ಬಿಐ ಲೈನ್ ಇನ್ಸೂರೆನ್ಸ್ ಕಂಪನಿಯ ಕಾರ್ಯನಿರ್ವಹಕ ನಿರ್ದೇಶಕ ಆನಂದ ಪೇಜಾವರ, ಕೆ.ಎಲ್‌ ಕುಂಡಾಂತಯ ಪ್ರಧಾನ ಅಭ್ಯಾಗತರಾಗಿದ್ದು, ಬಿಎಸ್‌ಕೆಬಿ ಉಪಾಧ್ಯಕ್ಷರುಗಳಾದ ವಾಮನ ಹೊಟ್ಟೆ ಮತ್ತು ಶೈಲಿನಿ ರಾವ್, ಕೋಶಾಧಿಕಾರಿ ಸಿಎ ಹರಿದಾಸ ಭಟ್, ಜೊತೆ ಕಾರ್ಯದರ್ಶಿ ಚಿನ್ನಾ ಮೇಲ್ಮನೆ ಮತ್ತು ಜಗದೀಸ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಬಿಎಸ್‌ಕೆಬಿ ಆಸೋಸಿಯೇಶನ್ ಕಾರ್ಯದರ್ಶಿ ಎ.ಪಿ.ಕೆ ಸೋತಿ, ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್‌ನ ವಿಶ್ವಸ್ಥ ಸದಸ್ಯರುಗಳಾದ ಎ.ಶ್ರೀನಿವಾಸ ರಾವ್, ಬಿ.ರಮಾನಂದ ರಾವ್, ಕೃಷ್ಣ ಆಚಾರ್ಯ, ಎಸ್.ಎಸ್. ಉಡುಪ ಜಮು, ಜೊತೆ ಕಾರ್ಯದರ್ಶಿ ಪಿ.ಸಿ.ಎನ್ ರಾವ್, ಜೊತೆ ಕೋಶಾಧಿಕಾರಿ ಪಿ. ಕುಸುಮಾ ಶ್ರೀನಿವಾಸ್, ಮಹಿಳಾ ವಿಭಾಗಧ್ಯಕ್ಷ ಐ.ಕೆ ಪ್ರೇಮಾ ಎಸ್.ರಾವ್, ವಿಜಯಲಕ್ಷ್ಮೀ ಸುರೇಶ್ ರಾವ್ ಇತರ ಪದಾಧಿಕಾರಿಗಳು, ಸದಸ್ಯರನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು