5:23 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Gold & Diamond | ಪುತ್ತೂರು: ನವೀಕೃತ, ವಿಸ್ತೃತ ಶೋರೂಂ ‘ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್’ ನಾಳೆ ಉದ್ಘಾಟನೆ

19/04/2025, 00:33

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಪುತ್ತೂರು(reporterkarnataka.com): ಸುಮಾರು 80 ವರ್ಷಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ನವೀಕೃತ ವಿಸ್ತೃತ ಶೋರೂಂ ‘ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್’ ಎಂಬ ಹೊಸ ಹೆಸರಿನೊಂದಿಗೆ ಏ.20ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ.


ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಅವರು ನೂತನ ಶೋರೂಂಗೆ ಚಾಲನೆ ನೀಡಲಿದ್ದಾರೆ. ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಈ ಮಳಿಗೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯದ ವಿಶೇಷತೆ. ಈ ಹೊಸ ಶೋರೂಂ ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ ಸಾಮಾಜಿಕ ಜವಾಬ್ದಾರಿಯ ಸೇವೆಯೊಂದಿಗೆ ಗ್ರಾಹಕರಿಗೆ ಸಂತೃಪ್ತಿ ಮತ್ತು ಸಂತೋಷ ನೀಡುತ್ತಾ ಬಂದಿದೆ. ಇನ್ನಷ್ಟು ದುಪ್ಪಟ್ಟು ಸಂತೋಷ ನೀಡುವಲ್ಲಿ ಸದಾ ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಮುಂದಾಗಿದೆ.
ಕಳೆದ ಮೂರು ತಲೆಮಾರಿನಿಂದ ಜನತೆಯ ವಿಶ್ವಾಸಗಳಿಸಿ ಬೆಳೆಯುತ್ತಿರುವ ಮುಳಿಯ ಸಂಸ್ಥೆ, ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ, ಸಂತೋಷವನ್ನು ನೀಡಿದೆ.
ಉದ್ಘಾಟನೆಗೊಳ್ಳಲಿರುವ ಈ ಅತ್ಯಾಧುನಿಕ ಶೈಲಿ ಮತ್ತು ವಿನ್ಯಾಸದ 4 ಅಂತಸ್ತಿನ ವಿಶಾಲ ಶೋರೂಂನಲ್ಲಿ ಚಿನ್ನ, ಬೆಳ್ಳಿ, ವಜ್ರ, ಆಧುನಿಕ ಬ್ರಾಂಡೆಡ್ ವಾಚುಗಳು, ಗಿಫ್ಟ್ ಐಟಂ ಹಾಗೂ ವಿವಿಧ ಬಗೆಯ ಚಿನ್ನಾಭರಣಗಳ ಕೌಂಟರ್ ಗಳು ಇವೆ. ಬೆಂಗಳೂರು, ಬೆಳ್ತಂಗಡಿ, ಮಡಿಕೇರಿ ಶೋ ರೂಂಗಳು ಕೂಡ ಮತ್ತಷ್ಟು ವಿಶಾಲವಾಗಿ ನವೀಕೃತಗೊಳ್ಳುತ್ತಿವೆ. ಗೋಣಿಕೊಪ್ಪದಲ್ಲೂ ಶೋರೂಂ ನಿರ್ಮಾಣಗೊಳ್ಳಲಿದೆ‌. ವಿಶಾಲ ಪಾರ್ಕಿಂಗ್, ಗ್ರಾಹಕರಿಗೆ ಊಟ, ತಿಂಡಿಯ ವ್ಯವಸ್ಥೆ, ಮಕ್ಕಳ ಆಟ ಮತ್ತು ಆರೈಕೆಗೆ ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನ ಶಾಲೆ ಆರಂಭಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು