1:39 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣ ಕಳವು: ಏರ್ ಪೋರ್ಟ್ ಲೋಡಿಂಗ್ ನೌಕರರಿಂದಲೇ ಕೃತ್ಯ; 5 ಮಂದಿ ಬಂಧನ

02/09/2025, 20:06

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭಾರಣ ಕಳವು ಮಾಡಿದ ಪ್ರಕರಣ ಸಂಬಂಧಿಸಿದಂತೆ ಬಜಪೆ ಪೊಲೀಸರು 5 ಮಂದಿಯನ್ನು ಬಂಧಿಸಿದ್ದು, ಅಘಾತಕ್ಕಾರಿ ವಿಷಯವೆಂದರೆ ಇವರಲ್ಲಿ 4 ಮಂದಿ ಏರ್ ಪೋರ್ಟ್ ಸಿಬ್ಬಂದಿಗಳಾಗಿದ್ದಾರೆ.
ಬಂಧಿತರನ್ನು ಮಂಗಳೂರು ಹೊರವಲಯದ ಕುಂದಾವರದ ನಿತಿನ್, ಮೂಡು ಪರೇರಾದ ರಾಜೇಶ್, ಸದಾನಂದ, ರವಿರಾಜ್, ಬಜಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ.
ಬಂಧಿತರಲ್ಲಿ ಪ್ರಮುಖ ನಾಲ್ವರು ಆರೋಪಿಗಳು ವಿಮಾನ ನಿಲ್ದಾಣದ ಲೋಡಿಂಗ್ ಮತ್ತು ಅನ್ ಲೋಡಿಂಗ್ ಮಾಡುವ ನೌಕರರು ಆಗಿದ್ದಾರೆ.

*ಏನಿದು ಘಟನೆ?:*
ಮಹಿಳಾ ಪ್ರಯಾಣಿಕರೊಬ್ಬರು ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ದಲ್ಲಿ
ಅಗಸ್ಟ್ 30ರಂದು ಆಗಮಿಸಿದ್ದರು. ವಿಮಾನ ನಿಲ್ದಾಣದ ಬ್ಯಾಗೇಜ್ ಬೆಲ್ಟ್ ನಿಂದ ಟ್ರೋಲಿ ಬ್ಯಾಗ್ ಪಡೆದು ಪರಿಶೀಲನೆ ನಡೆಸಿದ ವೇಳೆ 56 ಗ್ರಾಂ ತೂಕದ 4,50,000 ರೂ. ಮೌಲ್ಯದ ಚಿನ್ನಾಭಾರಣ ಕಳವು ಆಗಿರುವುದು ಗಮನಕ್ಕೆ ಬಂತು. ತಕ್ಷಣ ಅವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದರು. ತಕ್ಷಣ ಕಾರ್ಯಾಚರಣೆಗೆ ಇಳಿದ ಪೊಲೀಸರು ಏರ್ ಪೋರ್ಟ್
ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದ ವೇಳೆ ತಪ್ಪು ಒಪ್ಪಿಕೊಂಡಿದ್ದಾರೆ. ಚಿನ್ನಾಭರಣವನ್ನು ರವಿರಾಜ್ ಎಂಬವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ಈ ಹಿನ್ನಲ್ಲೆಯಲ್ಲಿ ಅ. ಕ್ರ.157/2025 ಕಲಂ 303(2) ಹಾಗೂ ರವಿರಾಜ್ ಎಂಬುವವರನ್ನು 312(2) ಬಿ.ಎನ್. ಎಸ್ ಆರೋಪದ ಮೇರೆಗೆ ಬಂಧಿಸಲಾಯಿತು. ಆರೋಪಿಗಳಿಂದ 5 ಲಕ್ಷ ಮೌಲ್ಯದ 50 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳು ಈ ಹಿಂದೆ ಸಹ ಹಲವು ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು