1:42 AM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಲೋಗೋ ಅನಾವರಣ

19/02/2025, 14:22

ಮಂಗಳೂರು(reporterkarnataka.com): ಸದಾ ಲವಲವಿಕೆಯಿಂದ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿರುವ ಜಿಲ್ಲೆಯ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಸಮಾಜಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಆಯೋಜಿಸಿ. ನಿಮ್ಮ ಎಲ್ಲ ಕಾರ್ಯಕ್ರಮಗಳ ಜೊತೆಗೆ ನಾನಿರುತ್ತೇನೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.
ಬುಧವಾರ ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ “ಸುವರ್ಣ ಸಂಭ್ರಮ“ ಲೋಗೋ ಅನಾವರಣಗೊಳಿಸಿ ಅವರು ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತಾಡಿ, ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೇ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ವರ್ಷಪೂರ್ತಿ ಏನಾದರೊಂದು ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ಜನಪರ ಕಾಳಜಿಯನ್ನು ಇಲ್ಲಿನ ಪತ್ರಕರ್ತರು ತೋರಿಸುತ್ತಿದ್ದಾರೆ. ಇಂದಿನ ಪತ್ರಕರ್ತ ವಿದ್ಯಾರ್ಥಿಗಳು ಹಿರಿಯ ಪತ್ರಕರ್ತರು ಹಾಕಿಕೊಟ್ಟ ದಾರಿಯಲ್ಲಿ ನಡೆದು ಇತರರಿಗೆ ಮಾದರಿಯಾಗಬೇಕು. ಸುವರ್ಣ ಸಂಭ್ರಮದಲ್ಲಿರುವ ಜಿಲ್ಲೆಯ ಪತ್ರಕರ್ತರ ಸಂಘಕ್ಕೆ ಒಳ್ಳೇದಾಗಲಿ ಎಂದರು.


ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಸಿ.ಎ.ಶಾಂತಾರಾಮ್ ಶೆಟ್ಟಿ ಮಾತಾಡಿ, ಜಿಲ್ಲೆಯ ಪತ್ರಕರ್ತರ ಬಗ್ಗೆ ಕಾಳಜಿ ಮತ್ತು ಹೆಮ್ಮೆಯಿದೆ. ಪತ್ರಕರ್ತರು ಬಿಡುವಿಲ್ಲದೆ ಕೆಲಸ ಮಾಡಿದರೆ ಮಾತ್ರ ನಾವು ಮರುದಿನ ಪತ್ರಿಕೆ ಓದಬಹುದು. ಪತ್ರಕರ್ತರು ನಡೆಸುವ ಕೆಲಸದಿಂದ ಅವರನ್ನು ಗುರುತಿಸಬಹುದು. ಬಹುಷಃ ಜಾಸ್ತಿ ಸಂಬಳವಿಲ್ಲದ ಪತ್ರಕರ್ತರು ಪ್ರೀತಿ ಮತ್ತು ವಿಶ್ವಾಸದಿಂದ ಆಪ್ತರಾಗುತ್ತಾರೆ ಎಂದರು.
ವೇದಿಕೆಯಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಬಾಳ ಜಗನ್ನಾಥ ಶೆಟ್ಟಿ, ಅನ್ನು ಮಂಗಳೂರು, ರಘುರಾಮ್, ಆನಂದ ಶೆಟ್ಟಿ, ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ವಿಜಯ ಕರ್ನಾಟಕದ ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು