7:05 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಗೊಂಬೆಗಳೇ ಇಲ್ಲಿ ಪ್ರಮುಖ ಆಕರ್ಷಣೆ: ನಾಳೆಯಿಂದ ದಸರಾ ಹಬ್ಬದ ಆಲಂಕಾರಿಕ ವಸ್ತುಗಳ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ

07/10/2021, 20:13

ಬೆಂಗಳೂರು(reporterkarnataka.com): ನಾಡ ಹಬ್ಬ ದಸರಾ ಅಂಗವಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅಕ್ಟೋಬರ್‌ 8 ರಿಂದ 10 ದಿನಗಳ ಕಾಲ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. 

ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ಸಹಯೋಗದಲ್ಲಿ ಏಕ್ ಈ ಮಾರಾಟ ಮೇಳದಲ್ಲಿ ದಸರಾ ಆಲಂಕಾರಕ್ಕೆ ಬೇಕಾಗಿರುವ ವಿಶೇಷ ಗೊಂಬೆಗಳು ಹಾಗೂ ಇನ್ನಿತರ ವಸ್ತುಗಳ ಒಂದೇ ವೇದಿಕೆಯ ಅಡಿಯಲ್ಲಿ ದೊರೆಯಲಿವೆ. 


ಪ್ರತಿ ದಸರಾ ಸಂಧರ್ಭದಲ್ಲೂ ತಮ್ಮ ಬೊಂಬೆಗಳ ಸಂಗ್ರಹದಲ್ಲಿ ಹೊಸತನ ಕಾಪಾಡುವ ನಿಟ್ಟಿನಲ್ಲಿ ಗ್ರಾಹಕರು ಕೆಲವೊಂದು ಗೊಂಬೆಗಳನ್ನು ಖರೀದಿಸುವುದು ನಡೆದು ಬಂದಿರುವ ಸಂಪ್ರದಾಯ. ಇಂತಹ ಸಂಪ್ರದಾಯಕ್ಕೆ ಪುಷ್ಠಿ ಕೊಡುವ ನಿಟ್ಟಿನಲ್ಲಿ ಹಾಗೂ ದಸರಾ ಹಬ್ಬಕ್ಕೆ ಬೇಕಾದ ಎಲ್ಲ ಸಾಮಗ್ರಿಗಳನ್ನು ಒಂದೇ ವೇದಿಕೆಯಡಿಯಲ್ಲಿ ಸಿಗುವ ರೀತಿಯಲ್ಲಿ ಮಾಡುವ ದೃಷ್ಟಿಯಿಂದ ಅಕ್ಟೋಬರ್‌ 8 ರಿಂದ 17 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ‌ ಇಂಡಿಯನ್‌ ಆರ್ಟಿಸನ್ಸ್‌ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. 


ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ದಸರಾ ಗೊಂಬೆಗಳು. ಈ ಬಾರಿ ಒಂದೇ ವೇದಿಕೆಯ ಅಡಿಯಲ್ಲಿ ಎಲ್ಲಾ ರೀತಿಯ ಹಾಗೂ ವಿಭಿನ್ನ ಆಯಾಮದ ಗೊಂಬೆಗಳನ್ನು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ.


80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ

ಇತ್ತೀಚಿನ ಸುದ್ದಿ

ಜಾಹೀರಾತು