10:42 PM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಗೋಣಿಕೊಪ್ಪ: ಕೇರಳದ ಖಾಸಗಿ ಬಸ್ -ಬೈಕ್ ಅಪಘಾತ: ಸವಾರರಿಬ್ಬರ ದಾರುಣ ಸಾವು

06/02/2026, 21:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳ ಮೂಲದ ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರೂ ಬೈಕ್ ಸವಾರರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ದಲ್ಲಿ ನಡೆದಿದೆ.ಕಳೆದ ರಾತ್ರಿ ಗೋಣಿಕೊಪ್ಪದ ಮುಖ್ಯ ರಸ್ತೆಯ ಉಮಾ ಮಹೇಶ್ವರಿ ದೇವಾಲಯ ಬಳಿ ತೆರಳುತ್ತಿದ್ದ ಬೈಕ್ ಗೆ ಏಕಾಎಕಿ ಬಸ್ ಅಪ್ಪಳಿಸಿದ್ದು ಗೋಣಿಕೊಪ್ಪಲಿನ ಸುಲೈಮಾನ್(32)ಹಾಗೂ ಪೌಲೋಸ್(28) ಮೃತ ರಾಗಿದ್ದಾರೆ.
ದೇವಾಲಯದ ಮುಖ್ಯ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ
ಸುಲೈಮಾನ್‌ ಸ್ಥಳದಲ್ಲಿ ಮೃತಪಟ್ರೆ ಇನ್ನೊಬ್ಬ ಬೈಕ್ ಸವಾರ ಗಂಭೀರ ಗಾಯಗೊಂಡ ಚೆನ್ನಂಗೊಲ್ಲಿ ನಿವಾಸಿ ಪೌಲೋಸ್ ಅವರನ್ನು ಹೆಚ್ಚಿನ ಚಿಕಿತ್ಸೆ ಗೆ ಮೈಸೂರಿಗೆ ಕರೆದೊಯ್ಯುವ ಸಂದರ್ಭ ದಾರಿ ಮದ್ಯೆ ಸಾವನಪ್ಪಿದ್ದಾರೆ. ಖಾಸಗಿ ಬಸ್ ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಇದಾಗಿದೆ. ಪ್ರಯಾಣಿಕರನ್ನು ಪಡೆಯುವ ಸಲುವಾಗಿ ತಡರಾತ್ರಿ ಈ ಭಾಗದಲ್ಲಿ ಕೇರಳದ ಖಾಸಗಿ ಬಸ್ ಗಳು ನಡೆಸುವ ಪೈಪೋಟಿ ಈ ಘಟನೆಗೆ ಕಾರಣವಾಗಿದೆ. ಸದ್ಯ
ಗೋಣಿಕೊಪ್ಪಲು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ಬಸ್ ಅನ್ನು ಪೊಲೀಸರ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು