1:10 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪಾಲ್ದನೆ ಚರ್ಚ್ ಐ.ಸಿ.ವೈ.ಎಂ. ಘಟಕಕ್ಕೆ ಗೊನ್ಝಾಲೊ ಗ್ರಾಸಿಯಾ ಮತ್ತು ಅತ್ಯುತ್ತಮ ಪಿ.ಆರ್. ಪ್ರಶಸ್ತಿ

15/06/2026, 17:17

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐ.ಸಿ.ವೈ.ಎಂ. ಘಟಕವು ತನ್ನ ಚಟುವಟಿಕೆಗಳಿಗಾಗಿ ಮಂಗಳೂರು ಧರ್ಮ ಪ್ರಾಂತ್ಯದ ಸೈಂಟ್ ಪೀಟರ್ ಸಿಟಿ ಡೀನರಿಯಿಂದ ಗೊನ್ಝಾಲೊ ಗ್ರಾಸಿಯಾ ಪ್ರಶಸ್ತಿ ಮತ್ತು ಅತ್ಯುತ್ತಮ ಪಿ.ಆರ್. ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಪಾಲ್ದನೆ ಚರ್ಚ್ ನ ಐ. ಸಿ. ವೈ. ಎಂ. ಘಟಕದ ನಿಕಟ ಪೂರ್ವ ಅಧ್ಯಕ್ಷರಾಗಿದ್ದ ವಿನಿಶಾ ಬ್ರಾಗ್ಸ್ ಅಧ್ಯಕ್ಷತೆಯ ತಂಡವು ಸೈಂಟ್ ಪೀಟರ್ ಸಿಟಿ ವಲಯ ವ್ಯಾಪ್ತಿಯಲ್ಲಿ ಅತ್ಯಧಿಕ ಕಾರ್ಯ ಚಟುವಟಿಕೆಗಳನ್ನು ಕೈಗೆತ್ತಿಕೊಂಡು ನಡೆಸಿದ್ದಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಸೈಂಟ್ ಪೀಟರ್ ಪಿನಾಕಲ್ ಪ್ರಶಸ್ತಿ ಪಡೆದ ಐ.ಸಿ.ವೈ.ಎಂ. ಘಟಕವನ್ನು ಪಾಲ್ದನೆ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಅಭಿನಂದಿಸಿದ್ದಾರೆ. ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ರೋಷನ್ ಮೊಂತೇರೊ, ಸರ್ವ ಆಯೋಗಗಳ ಸಂಯೋಜಕ ವಿಲಿಯಂ ಲೋಬೊ ಮತ್ತು ಇತರ ಪದಾಧಿಕಾರಿಗಳು ಐ.ಸಿ.ವೈ.ಎಂ. ಘಟಕದ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿ ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು