11:50 AM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

Good Friday | ಕರಾವಳಿ ಕರ್ನಾಟಕದಲ್ಲಿ ಭಕ್ತಿಭಾವದೊಂದಿಗೆ ಗುಡ್ ಪ್ರೈಡೇ ಆಚರಣೆ: ಉಪವಾಸ, ಧ್ಯಾನ, ಸಾಮೂಹಿಕ ಪ್ರಾರ್ಥನೆ

18/04/2025, 14:39

ಮಂಗಳೂರು(reporterkarnataka.com): ಕ್ರೈಸ್ತರು ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಪ್ರೈಡೇ) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.
ಕರಾವಳಿಯ ಜಿಲ್ಲೆಗಳ ಎಲ್ಲ ಚರ್ಚ್ ಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು. ಎಲ್ಲ ಕಾರ್ಯಕ್ರಮಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮಂಗಳೂರಿನ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಶುಭ ಶುಕ್ರವಾರದ ವಿಧಿವಿಧಾನಗಳನ್ನು ಕಾಸರಗೋಡಿನ ಬೋವಿಕ್ಕಾನದಲ್ಲಿ ನಡೆಸಿಕೊಟ್ಟರು.
ಶಿಲುಬೆಯ ಹಾದಿ:ಕೆಲವು ಚರ್ಚ್ ಗಳಲ್ಲಿ ಯೇಸು ಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ತನಕದ ಘಟನೆಗಳನ್ನು ಪ್ರಸ್ತುತ ಪಡಿಸಲಾಯಿತು. ಶಿಲುಬೆಯ ಹಾದಿಯ 14 ಪ್ರಮುಖ ಘಟ್ಟಗಳನ್ನು ನೆನಪಿಸಿ ಧ್ಯಾನಿಸಿ ಪ್ರಾರ್ಥಿಸಿದರು. ಸಂಜೆ ಚರ್ಚ್ ಗಳಲ್ಲಿ ನಡೆದ ಪ್ರಾರ್ಥನಾ ವಿಧಿಗಳಲ್ಲಿ ಬೈಬಲ್ ವಾಚನದ ವೇಳೆ ಧರ್ಮಗುರುಗಳು ರಕ್ತವರ್ಣದ ಪೂಜೆ ಬಟ್ಟೆಯನ್ನು ಧರಿಸಿ ಯೇಸು ಕ್ರಿಸ್ತರ ಕೊನೆಯ ಗಳಿಗೆಗಳ ಕಥನವನ್ನು ಓದಿದರು. ಬಳಿಕ ಪ್ರವಚನ ನೀಡಿದರು. ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ, ಶಿಲುಬೆಯ ಆರಾಧನೆ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು