4:37 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್: ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ

21/03/2026, 22:39

ನವದೆಹಲಿ(reporterkarnataka.com): ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ (LPG) ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಾಡ. ಶೇಕಡಾ 50ರ ಮಟ್ಟಕ್ಕೆ ತಲುಪಲಿದೆ. ಮಾರ್ಚ್ 23, 2026ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ.
ಈ ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಧಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.
ವಲಸೆ ಕಾರ್ಮಿಕರ ಹಿತದೃಷ್ಟಿಯಿಂದ ಅವರಿಗೆ 5 ಕೆಜಿ ಸಣ್ಣ ಸಿಲಿಂಡರ್ (FTL) ಒದಗಿಸುವ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಹೆಚ್ಚುವರಿ ಅನುದಾನವು ಕೇವಲ ನಿಗದಿಪಡಿಸಿದ ವಲಯಗಳಿಗೆ ತಲುಪುವಂತೆ ನೋಡಿಕೊಳ್ಳಲು ಮತ್ತು ಕಾಳಸಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು