1:10 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Good News: ಮಹಿಳಾ ಸ್ವಸಹಾಯ ಸಂಘಗಳಿಗೆ ಸರಕಾರದಿಂದ ಬಡ್ಡಿ ರಹಿತ ಸಾಲ

21/06/2022, 09:18

ಬೆಂಗಳೂರು(reporterkarnataka.com):

ರಾಜ್ಯದಲ್ಲಿನ ಮಹಿಳಾ ಸ್ವಸಹಾಯ ಸಂಘಗಳಿಗೆ ಒಂದು ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಇಂದು ವಿಜಯನಗರ ನಗರದಲ್ಲಿ ಆಯೋಜಿಸಿದ್ದಂತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, 32 ಫಲಾನುಭವಿಗಳಿಗೆ ಸಾಗುವಳಿ ಪಟ್ಟ, 44 ಮಹಿಳಾ ಸ್ವಸಹಾಯ ಸಂಘಗಳಿಗೆ ತಲಾ 1 ಲಕ್ಷ ಬಡ್ಡಿರಹಿತ ಸಾಲ ಸೌಲಭ್ಯದ ಚೆಕ್ ವಿತರಿಸಿದರು.

ನಾನು ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷನಾಗಿದ್ದು, ಸ್ವಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲ ಕೊಡುವ ಯೋಜನೆ ಇದೆ. ಅನೇಕ ಸ್ವಸಹಾಯ ಸಂಘಗಳು ಸಕಾಲಕ್ಕೆ ಹಣ ಮರುಪಾವತಿಸುತ್ತಿವೆ ಎಂದರು.

ಸದ್ಯ ಮಹಿಳಾ ಸ್ವಸಹಾಯ ಸಂಘಗಳಿಗೆ 1 ಲಕ್ಷದವರೆಗೆ ಬಡ್ಡಿ ರಹಿತ ಸಾಲ ಕೊಡಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಿಸುವಂತೆ ನಾನು ಸೇರಿದಂತೆ ಜನಪ್ರತಿನಿಧಿಗಳು ಕೋರಿದ್ದೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು