5:24 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Good News: SSLC ಮತ್ತು ITI ಪಾಸಾದವರಿಗೆ ಬಿಎಂಟಿಸಿಯಲ್ಲಿ ಇದೆ ಉದ್ಯೋಗ

04/03/2022, 10:50

ಬೆಂಗಳೂರು(reporterkarnataka.com):  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( ಬಿಎಂಟಿಸಿ) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಯ ವಿವರ : -300 ಅಪ್ರೆಂಟಿಸ್ ಹುದ್ದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಫೆ.25, 2022.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 30, 2022.

ಪೂರ್ಣಾವಧಿಯಲ್ಲಿ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.

ವಿದ್ಯಾರ್ಹತೆ :- ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಅಥವಾ ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ : – ಅಪ್ರೆಂಟಿಸ್ ಹುದ್ದೆಗಳಿಗೆ ಮಾರ್ಚ್ 30, 2022 ರ ಅನ್ವಯ ಕನಿಷ್ಠ 16 ರಿಂದ ಗರಿಷ್ಠ 26 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ 6000/- ಮತ್ತು ಐಟಿಐ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ 7000/- ರೂ.ತರಬೇತಿ ಭತ್ಯೆ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:- ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿಯ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 30, 2022 ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ :- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ತರಬೇತಿ ಕೇಂದ್ರ, 2 ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ, ಬೆಂಗಳೂರು – 560027.

ಇತ್ತೀಚಿನ ಸುದ್ದಿ

ಜಾಹೀರಾತು