ಇತ್ತೀಚಿನ ಸುದ್ದಿ
ಮಹಾನಗರ ಪಾಲಿಕೆ ನೌಕರರ ಬೇಡಿಕೆ ಈಡೇರಿಸಲು ಸರಕಾರ ವಿಫಲ: 10 ಪಾಲಿಕೆಗಳ ಆನಿರ್ಧಿಷ್ಟಾವಧಿ ಹೋರಾಟ ಮುಂದುವರಿಕೆ
12/07/2025, 21:54

ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಇಂದು ನಗರಾಭಿವೃದ್ದಿ ಕಾರ್ಯದರ್ಶಿಗಳ ಜೊತೆಯಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ.ಷಡಕ್ಷರಿರವರು, ಸಚಿವಾಲಯ ನೌಕರರ ಸಂಘದ ಅಧ್ಯಕ್ಷರಾದ ರಮೇಶ್ ಸಂಗಾರವರು ಮತ್ತು ಹತ್ತು ಮಹಾನಗರ ಪಾಲಿಕೆ ಅಧ್ಯಕ್ಷರು, ಪದಾಧಿಕಾರಿಗಳ ಜೊತೆಯಲ್ಲಿ ಚರ್ಚೆ ಜರುಗಿತು.
ಮಹಾನಗರ ಪಾಲಿಕೆ ನೌಕರರ ಸಂಘದ ನ್ಯಾಯಯುತ ಬೇಡಿಕೆಗಳು ಈಡೇರಿಸಲು ಸರ್ಕಾರ ವಿಫಲವಾಗಿದೆ, ಕಾರ್ಯದರ್ಶಿಗಳ ಜತೆಯಲ್ಲಿ ನಡೆದ ಚರ್ಚೆ ಯಾವುದೇ ಫಲಪ್ರದವಾಗಿಲ್ಲ ಅದ್ದರಿಂದ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆಯಲಿದೆ.
*ಬೇಡಿಕೆಗಳು;*
7ನೇ ವೇತನ ಆಯೋಗದ ವರದಿ ಮಹಾನಗರ ಪಾಲಿಕೆ ನೌಕರರಿಗೆ ವಿಸ್ತರಣೆ, ವೃಂದ ಮತ್ತು ನೇಮಕಾತಿಯಲ್ಲಿ ತಿದ್ದುಪಡಿ ಹಾಗೂ ಕೆಜಿಐಡಿ ಮತ್ತು ಜಿಪಿಎಫ್ ಸೌಲಭ್ಯ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಾಗಬೇಕು. ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಪ್ರತಿವರ್ಷ ಕ್ರೀಡಾಕೂಟ ಆಯೋಜನೆ ಮಾಡಬೇಕು. ಮಹಾನಗರ ಪಾಲಿಕೆಯಲ್ಲಿ ಹಲವಾರು ವರ್ಷಗಳಿಂದ ಮುಂಬಡ್ತಿ ನೀಡಿಲ್ಲ ಇಷ್ಟು ನ್ಯಾಯಯುತ ಬೇಡಿಕೆಗಳು
ಹುಬಳ್ಳಿ-ಧಾರವಾಡ, ತುಮಕೂರು, ಮಂಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ವಿಜಯಪುರ ಹಾಗೂ ಕಲಬುರಗಿ, ಬೆಳಗಾಂ, ಬಳ್ಳಾರಿ ಮಹಾನಗರ ಪಾಲಿಕೆಗಳು ಹೋರಾಟ ಮುಂದುವರೆಯಲಿದೆ.