9:27 PM Friday3 - October 2025
ಬ್ರೇಕಿಂಗ್ ನ್ಯೂಸ್
ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ

ಇತ್ತೀಚಿನ ಸುದ್ದಿ

ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು: ಉಡುಪಿ ನಿರ್ಗಮನ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

20/06/2025, 18:47

ಉಡುಪಿ(reporterkarnataka.com): ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು, ಸರ್ಕಾರಿ ಕೆಲಸಗಳನ್ನು ನಿಷ್ಠೆಯಿಂದ ಮಾಡಿದರೆ ಜನರು ನಮ್ಮನ್ನು ಗೌರವಿಸುತ್ತಾರೆ ಎಂದು ಉಡುಪಿ ಜಿಲ್ಲೆಯ ನಿರ್ಗಮನ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಉತ್ತಮವಾದ ಜಿಲ್ಲೆಯಾಗಿದ್ದು ಇಲ್ಲಿನ ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉತ್ತಮ ರೀತಿಯಿಂದ ಒಂದು ತಂಡವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಡಾ. ವಿದ್ಯಾಕುಮಾರಿ ನುಡಿದರು.
ಜನರು ನಿರೀಕ್ಷೆಯನ್ನಿಟ್ಟುಕೊಂಡು ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಬರುತ್ತಿದ್ದವರಿಗೆ ನನ್ನಿಂದ ಸಾಧ್ಯವಾದಷ್ಟು ಕೆಲಸ ಕಾರ್ಯಗಳನ್ನು ಮಾಡಿ ಕೊಟ್ಟಿದ್ದೇನೆ. ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು, ಸರ್ಕಾರಿ ಕೆಲಸಗಳನ್ನು ನಿಷ್ಠೆಯಿಂದ ಮಾಡಿದರೆ ಜನರು ನಮ್ಮನ್ನು ಗೌರವಿಸುತ್ತಾರೆ ಎಂದರು.
ಮಳೆಗಾಲದ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಉತ್ತಮ ನಿರ್ವಹಣೆ, ಆರೋಗ್ಯ ಇಲಾಖೆಯಲ್ಲಿ ಉತ್ತಮ ಸೌಲಭ್ಯ, ಮರಳು ಹಾಗೂ ಗಣಿ ಸಮಸ್ಯೆ ಬಗೆಹರಿಸುವಲ್ಲಿ ಹಾಗೂ ಮತದಾನ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ಕಳೆದ ಐದು ವರ್ಷದ ನಂತರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ತಂದು ಕೊಟ್ಟಿದೆ ಎಂದರು.
ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ನಿರ್ಗಮನ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರ್ತವ್ಯ ನಿರ್ವಹಣೆ ಬಗ್ಗೆ ಮಾತನಾಡಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಕರಾವಳಿ ಕಾವಲು ಪಡೆ ಅಧೀಕ್ಷಕ ಮಿಥುನ್, ಡಿ.ಎಫ್.ಓ ಗಣಪತಿ, ಎ.ಎಸ್.ಪಿ. ಹರ್ಷಂಪ್ರಿಯವದ, ಸಹಾಯಕ ಕಮಿಷನರ್ ರಶ್ಮಿ, ಜಿಲ್ಲಾ, ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅನಿಸಿಕೆ ಹಂಚಿಕೊಂಡರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸ್ವಾಗತಿಸಿದರು. ಯುವಜನ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು