3:00 AM Thursday15 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Governor Speech | ಜಂಟೀ ಅಧಿವೇಶನದಲ್ಲಿ ಭಾಷಣ: ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಶೇ.99 ಅಂಕ ನೀಡಿದ ರಾಜ್ಯಪಾಲರು

03/03/2025, 15:30

ಬೆಂಗಳೂರು(reporterkarnataka.com): ಸಂವಿಧಾನ ಮುಖ್ಯಸ್ಥರೂ ಆಗಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ರಾಜ್ಯದ ಸರ್ಕಾರದ ಸಾಧನೆಗಳನ್ನು ಹಾಗೂ ಅಭಿವೃದ್ಧಿ ಕಾರ್ಯದ ಮುನ್ನೋಟವನ್ನು ಬಹಳ ಸಂತೋಷ ವ್ಯಕ್ತಪಡಿಸಿದ್ದಾರೆ.


ನಮ್ಮ ಸರ್ಕಾರ ಕಳೆದ ಆಯವ್ಯಯದಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಕೃಷಿ, ಹೈನುಗಾರಿಕೆ, ನೀರಾವರಿ, ಬೆಂಗಳೂರು ನಗರಾಭಿವೃದ್ಧಿ, ವಸತಿ, ಬಂಡವಾಳ ಹೂಡಿಕೆ, ರೇಷ್ಮೆ, ಮೂಲಭೂತ ಸೌಕರ್ಯ, ಶಿಕ್ಷಣ ಸೇರಿದಂತೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ ಬಗ್ಗೆ ಶ್ಲಾಘಿಸಿದ್ದಾರೆ. ಅಲ್ಲದೆ, ನಮ್ಮ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮತ್ತು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಅವರು ಘೋಷಣೆ ಮಾಡಿದ್ದ 334 ಭರವಸೆಗಳಲ್ಲಿ 331 ಭರವಸೆಗಳನ್ನು ಜಾರಿ ಮಾಡಿ ಜನಕಲ್ಯಾಣಕ್ಕೆ ಕಾಂಗ್ರೆಸ್‌ ಸರ್ಕಾರ ನೆರವಾಗಿದೆ. ಶೇ.99. ಅಂಕಗಳನ್ನು ರಾಜ್ಯಪಾಲರು ನೀಡಿದ್ದಾರೆ. ನಮ್ಮ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿರುವಂಥ 117 ವಿಷಯಗಳನ್ನು ಸದನ ಮತ್ತು ರಾಜ್ಯದ ಜನತೆಯ ಮಧ್ಯೆ ಮಂಡಿಸಿರುವುದನ್ನು ವಿರೋಧ ಪಕ್ಷದ ನಾಯಕರು ಕೂಲಂಕಷವಾಗಿ ಓದಬೇಕು. ಅದನ್ನು ಬಿಟ್ಟು ಟೀಕೆ ಮಾಡಬೇಕೆಂದೇ ಟೀಕೆ ಮಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು