2:24 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

28/06/2026, 23:19

ಬೆಂಗಳೂರು(reporterkarnataka.com): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ನಿನ್ನೆ ಬೆಂಗಳೂರಿಗೆ ‌ಆಗಮಿಸಿದ್ದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ 27ರಂದು ಬೆಂಗಳೂರು ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ನಾಡಪ್ರಭು ಕೆಂಪೇಗೌಡ ಅವರ 517 ಜಯಂತಿ ಕಾರ್ಯಕ್ರಮ, ರಾಜಭವನದಲ್ಲಿ ನಶಾಮುಕ್ತ‌ ಭಾರತ ಕಾರ್ಯಕ್ರಮದ ಸಲುವಾಗಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಇಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನಾಚರಣೆ ಮತ್ತು ನಶಾ ಮುಕ್ತ ಭಾರತ್ ಕಾನ್ ಕ್ಲೈವ್ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಯುಸೇನೆಯ ವಿಶೇಷ ವಿಮಾನದ ಮೂಲಕ ನವದೆಹಲಿಗೆ ಪ್ರಯಾಣಿಸಿದರು.


ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ಫರೀದ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ‌ ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು. ಪಿ.ಎಸ್ ಸೇರಿದಂತೆ ಗಣ್ಯರು ‌ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು