8:04 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Govt Hospital | ಖಾಸಗಿ ಸಹಭಾಗಿತ್ವದಲ್ಲಿ ಮಂಗಳೂರಿನ ವೆನ್ಲಾಕ್, ಲೇಡಿಗೋಶನ್ ಆಸ್ಪತ್ರೆಗಳ ಇನ್ನಷ್ಟು ಅಭಿವೃದ್ಧಿ: ಸಚಿವ ದಿನೇಶ್ ಗುಂಡೂರಾವ್

06/03/2025, 22:49

ಬೆಂಗಳೂರು(reporterkarnataka.com):ಸರ್ಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರ ಮಂಗಳೂರಿನ ವೆನ್ ಲಾಕ್ ಹಾಗೂ ಲೇಡಿ ಗೋಶನ್ ಆಸ್ಪತ್ರೆಗಳನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಿ, ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಅವರು ನಿಯಮ 72ರಡಿ ಮಂಗಳೂರಿನಲ್ಲಿ ವೆನ್‌ಲಾಕ್ ಆಸ್ಪತ್ರೆ ಮತ್ತು ಲೇಡಿಗೋಶನ್ ಆಸ್ಪತ್ರೆಗಳನ್ನು ವಿಭಾಗೀಯ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಕುರಿತು, ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದರು.
ಮಂಗಳೂರಿನ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ IPHS ಮಾನದಂಡಗಳಂತೆ ಹಾಗೂ ಅಗತ್ಯಕ್ಕೆ ತಕ್ಕಂತೆ ಸರ್ಕಾರವು ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಹಾಗೂ ಮಾನವ ಸಂಪನ್ಮೂಲಗಳನ್ನು ಒದಗಿಸುತ್ತಾ ಬಂದಿದೆ
ಪ್ರಸ್ತುತ ಈ ಆಸ್ಪತ್ರೆಯು 905 ಹಾಸಿಗೆಗಳ ಸಾಮರ್ಥ್ಯ ಹಾಗೂ ಲೇಡಿಗೋಷನ್ ಆಸ್ಪತ್ರೆಯು 272 ಹಾಸಿಗೆಗಳ ಸಾಮರ್ಥ್ಯ ಹೊಂದಿದೆ. ಮುಂದುವರೆದು 50 ಬೆಡ್ ಗಳ Critical care block ಮಂಜೂರಾಗಿದ್ದು, ಕಟ್ಟಡ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಲೇಡಿಗೋಶನ್ ಆಸ್ಪತ್ರೆ ಹರಿಗೆ ಮತ್ತು ಮಕ್ಕಳ ಆಸ್ಪತ್ರೆಯಾಗಿ ಸ್ವತಂತ್ರವಾಗಿ ಕೆಲಸ ನಿರ್ವಹಿಸುತ್ತಿದೆ ಎಂದರು.
ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯು ಖಾಸಗಿ ಸಹಭಾಗಿತ್ವದಲ್ಲಿ ಕೆ.ಎಂ.ಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಯೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡಿದ್ದು, ಸಾರ್ವಜನಿಕರಿಗೆ ಸೇವೆಯನ್ನು ನೀಡಲಾಗುತ್ತಿದೆ ಹಾಗೂ ಅದರ ವತಿಯಿಂದ ಕ್ಯಾಥ್ ಲ್ಯಾಬ್ ನಿರ್ಮಾಣ ಮಾಡಲಾಗುತ್ತಿದೆ. ಎಂದು ಅವರು ತಿಳಿಸಿದರು.
ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಸರ್ಜಿಕಲ್ ಬ್ಲಾಕ್ ಕಟ್ಟಡದಲ್ಲಿ 10Modular OT ಗಳು ಮತ್ತು 180 ಬೆಡ್‌ ಗಳಿರುವ ಹೊಸ ಸರ್ಜಿಕಲ್ ಬ್ಲಾಕ್ ಕಟ್ಟಡ ನಿರ್ಮಾಣಗೊಂಡಿದ್ದು. ಈ ಆಸ್ಪತ್ರೆಯಲ್ಲಿ ಡಯಾಲಿಸಿಸ್ ವಿಭಾಗವು ನೆಪ್ರೊಪ್ಲಸ್ ಸಂಸ್ಥೆಯ ವತಿಯಿಂದ ಕಾರ್ಯ ನಿರ್ವಹಿಸುತ್ತಿದ್ದು, 235 ರೋಗಿಗಳು ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.
ಇನ್ಫೋಸಿಸ್ ಫೌಂಡೇಶನ್ ವತಿಯಿಂದ 200 ಹಾಸಿಗೆಗಳ ಸಾಮರ್ಥ್ಯದ ರೀಜನಲ್ ಅಡ್ವಾನ್ಸ್ಡ್ ಪೀಡಿಯಾಟ್ರಿಕ್ ಕೇರ್ ಸೆಂಟರ್ ಕಾರ್ಯ ನಿರ್ವಹಿಸುತ್ತಿದ್ದು, ಮಕ್ಕಳಿಗೆ ಉನ್ನತ ಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು