5:18 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

Govt Hospital | ಮಂಗಳೂರು ವೆನ್ಲಾಕ್, ಲೇಡಿಗೋಷನ್ ಆಸ್ಪತ್ರೆಗೆ ಆರೋಗ್ಯ ಆಯುಕ್ತರ ಭೇಟಿ: ಸಿಬ್ಬಂದಿ ನೇಮಕಾತಿ ಪರಿಶೀಲನೆ ಭರವಸೆ

16/03/2025, 21:54

ಮಂಗಳೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ. ಕೆ.ಬಿ. ಶಿವಕುಮಾರ್ ಅವರು ಭಾನುವಾರ ಮಂಗಳೂರಿಗೆ ಆಗಮಿಸಿ, ಜಿಲ್ಲಾ ವೆನ್ ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಗಳಿಗೆ ಭೇಟಿ ನೀಡಿದರು.
ಮೊದಲು ವೆನ್ ಲಾಕ್ ಗೆ ಆಗಮಿಸಿದ ಅವರು, ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ದೊರಕುತ್ತಿರುವ ಸೌಲಭ್ಯಗಳ ಮಾಹಿತಿ ಪಡೆದ ಅವರು, ಸ್ವಚ್ಛತೆ ಮತ್ತು ಆಸ್ಪತ್ರೆ ಪರಿಸರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೆನ್ ಲಾಕ್ ಮೂಲಸೌಕರ್ಯವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಸಿಬ್ಬಂದಿ ನೇಮಕಾತಿಯ ಬಗ್ಗೆ ಬೇಡಿಕೆ ಬಂದಿದ್ದು, ಸರಕಾರದ ಮಟ್ಟದಲ್ಲಿ ಇದನ್ನು ಪರಿಶೀಲಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

ಬಳಿಕ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿನ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನವಜಾತ ಶಿಶುಘಟಕ ವೀಕ್ಷಿಸಿದ ಅವರು, ಆಸ್ಪತ್ರೆಯಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ಸ್ಥಾಪನೆಯಿಂದ ಶಿಶು ಮರಣ ಪ್ರಮಾಣ ಕಡಿಮೆಗೊಂಡಿರುವುದಕ್ಕೆ ಶ್ಲಾಘಿಸಿದರು. ಸಿಎಸ್ಆರ್ ಅನುದಾನದಿಂದ ರೋಗಿಗಳಿಗೆ ಅತ್ಯಾಧುನಿಕ ಸೌಲಭ್ಯ ಗಳನ್ನು ಒದಗಿಸಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ವೆನ್ ಲಾಕ್ ಅಧೀಕ್ಷಕ ಡಾ. ಶಿವಕುಮಾರ್, ಲೇಡಿಗೋಷನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು