6:53 PM Monday17 - March 2025
ಬ್ರೇಕಿಂಗ್ ನ್ಯೂಸ್
ಬಿಜೆಪಿ ತರಹ ಕೇವಲ 10% ಜನರ ಕೈಹಿಡಿದು ಶೇ. 90% ಜನರನ್ನು ಕೈಬಿಟ್ಟಿಲ್ಲ:… ಕೇಂದ್ರ ಸರಕಾರ ಕೊಟ್ಟಿರುವುದು ಸಾಲ, ನಮ್ಮ ಪಾಲಿನ ಅನುದಾನವಲ್ಲ: ಸದನದಲ್ಲಿ ಸಿಎಂ ಸಿದ್ದರಾಮಯ್ಯ… ಲೋಕಸಭೆ ಚುನಾವಣೆ ನಂತ್ರ ಗ್ಯಾರಂಟಿ ಯೋಜನೆ ನಿಂತೋಗುತ್ತೆ ಎಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ:… Ex CM | ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನು ಸಮೀಕ್ಷೆ ಮಾಡಿ:… ಮಳವಳ್ಳಿಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಸಾವು: ಅಧಿಕಾರಿಗಳಿಂದ ಮಾಹಿತಿ ಪಡೆದ ಕೇಂದ್ರ… ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ… Govt Land Encroachment | ಬೆಂಗಳೂರು ನಗರದ ವಿವಿಧೆಡೆ 59.63 ಕೋಟಿ ಮೌಲ್ಯದ… PWD Minister | ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ:… Home Minister | ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ…

ಇತ್ತೀಚಿನ ಸುದ್ದಿ

Govt Hospital | ಶ್ರೀನಿವಾಸಪುರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ: ಸ್ತ್ರೀರೋಗ ತಜ್ಞೆಯೂ ಇಲ್ಲ

17/03/2025, 14:37

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪಟ್ಟಣದ 100 ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 5 ವರ್ಷಗಳಿಂದ ಕಿವಿ, ಮೂಗು, ಗಂಟಲು (ಇಎನ್‌ಟಿ) ತಜ್ಞರ ಕೊರತೆ ಉಂಟಾಗಿದೆ. ಈ ನಡುವೆ, ಸ್ತ್ರೀರೋಗ ತಜ್ಞೆ ಡಾ. ಗೌಸಿಯಾ ಬಾನು ರಾಜೀನಾಮೆ ನೀಡಿದ ಕಾರಣ, ಮಹಿಳಾ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಲಭ್ಯವಿಲ್ಲ.
ಶ್ರೀನಿವಾಸಪುರ ಹಾಗೂ ಸುತ್ತಮುತ್ತಲಿನ 300ಕ್ಕೂ ಹೆಚ್ಚು ಹಳ್ಳಿಗಳ ಜನತೆ ಈ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಡ ರೋಗಿಗಳು ತುರ್ತು ಚಿಕಿತ್ಸೆಗಾಗಿ, ಖಾಸಗಿ ಆಸ್ಪತ್ರೆಗಳು, ಕೋಲಾರ , ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಗಳು ಅಥವಾ ಆಂಧ್ರಪ್ರದೇಶದ ಮದನಪಲ್ಲಿಗೆ ತೆರಳುವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಜನರು ದೂರ ಪ್ರಯಾಣ, ಹೆಚ್ಚಿದ ವೆಚ್ಚ, ಮತ್ತು ಚಿಕಿತ್ಸೆಗಾಗಿ ನಿರೀಕ್ಷಿಸುವ ಸಮಸ್ಯೆ ಎದುರಿಸುತ್ತಿದ್ದಾರೆ.
ಸರ್ಕಾರ ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಅಗತ್ಯ ತಜ್ಞ ವೈದ್ಯರನ್ನು ನೇಮಕ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತ್ವರಿತ ಕ್ರಮ ಕೈಗೊಂಡು, ತಾಲ್ಲೂಕು ಮಟ್ಟದಲ್ಲಿ ವೈದ್ಯರ ನೇಮಕಾತಿ ಖಾಯಂಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು