9:29 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

Govt Land Encroachment | ಬೆಂಗಳೂರು ನಗರದ ವಿವಿಧೆಡೆ 59.63 ಕೋಟಿ ಮೌಲ್ಯದ 19 ಎಕರೆ ಅಕ್ರಮ ಒತ್ತುವರಿ ತೆರವು: ಸ್ಮಶಾನ, ಗೋಮಾಳ ಕೂಡ ಕಬಳಿಕೆ

15/03/2025, 22:12

ಬೆಂಗಳೂರು(reporterkarnataka.com): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.59.63 ಕೋಟಿ ಅಂದಾಜು ಮೌಲ್ಯದ ಒಟ್ಟು 19 ಎಕರೆ 7 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು.
ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಗುಂಡುತೋಪು, ಸ್ಮಶಾನ ಮತ್ತು ಸರ್ಕಾರಿ ಖರಾಬ್ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.


ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಉತ್ತರಿ ಗ್ರಾಮದ ಸ.ನಂ 31ರ ಸರ್ಕಾರಿ ಗೋಮಾಳ ಸಂತೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1.0. ಎಕರೆ/ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 3.00 ಕೋಟಿಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ದೇವಗೆರೆ ಗ್ರಾಮದ ಸ.ನಂ 67 ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 3.0 ಎಕರೆ/ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 6 ಕೋಟಿಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ಗಂಗೇನಹಳ್ಳಿ ಗ್ರಾಮದ ಸ.ನಂ 1, 178, 170 & 173 ರ ‘ಬ’ ಖರಾಬ್ ರ ಕಾಲುದಾರಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.14 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.56 ಕೋಟಿಗಳಾಗಿರುತ್ತದೆ. ಬೇಗೂರು ಹೋಬಳಿಯ ಎಳೇನಹಳ್ಳಿ ಗ್ರಾಮದ ಸ.ನಂ 22ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.01 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.00 ಕೋಟಿಗಳಾಗಿರುತ್ತದೆ.
ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿಯ ದ್ಯಾವಸಂದ್ರ ಗ್ರಾಮದ ಸ.ನಂ 29ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.03 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.15 ಕೋಟಿಗಳಾಗಿರುತ್ತದೆ. ಕಸಬಾ ಹೋಬಳಿಯ ಮೆಣಸಿಗನಹಳ್ಳಿ ಗ್ರಾಮಗಳ ಸ.ನಂ 31ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.25 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.40 ಕೋಟಿಗಳಾಗಿರುತ್ತದೆ. ಅತ್ತಿಬೆಲೆ ಹೋಬಳಿಯ ಜಿಗಳ ಮತ್ತು ಗೊಲ್ಲಹಳ್ಳಿ ಗ್ರಾಮಗಳ ಸ.ನಂ 45 & 26ರ ಗುಂಡುತೋಪು & ಸ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1.11 ಎಕರೆ/ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 8.00 ಕೋಟಿಗಳಾಗಿರುತ್ತದೆ. ಸರ್ಜಾಪುರ ಹೋಬಳಿಯ ಸರ್ಜಾಪುರ ಮತ್ತು ತಿಗಳಚೌಡೇನಹಳ್ಳಿ ಗ್ರಾಮಗಳ ಸ.ನಂ 325 & 111/2, 1/2 ಮತ್ತು ಇತರೆ ಕುಂಟೆ & ಕಾಲುವೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.30 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.85 ಕೋಟಿಗಳಾಗಿರುತ್ತದೆ.
ಯಲಹಂಕ ತಾಲ್ಲೂಕಿನ ಯಲಹಂಕ ಹೋಬಳಿಯ ದೊಡ್ಡಬೆಟ್ಟಹಳ್ಳಿ ಗ್ರಾಮದ ಸ.ನಂ 1 ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.30 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 8.00 ಕೋಟಿ, ಬೆಳ್ಳಹಳ್ಳಿ ಗ್ರಾಮದ ಸ.ನಂ. 55ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 3 ಎಕರೆಗಳಾಗಿದ್ದು ಅಂದಾಜು ಮೌಲ್ಯ ರೂ 5.00 ಕೋಟಿಗಳಾಗಿರುತ್ತದೆ. ಹೆಸರುಘಟ್ಟ ಹೋಬಳಿಯ ಆವಿಶ್ವನಾಥಪುರ ಗ್ರಾಮದ ಸ.ನಂ 63 ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1.30 ಎಕರೆ/ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 5.00 ಕೋಟಿಗಳಾಗಿರುತ್ತದೆ. ಹೆಸರುಘಟ್ಟ ಹೋಬಳಿಯ ಬ್ಯಾಲಕೆರೆ ಗ್ರಾಮದ ಸ.ನಂ 101 ಸನ್ಮಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.07 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2.00 ಕೋಟಿಗಳಾಗಿರುತ್ತದೆ. ಜಾಲ-3 ಹೋಬಳಿಯ ಮಹದೇವಕೊಡಿಗೆಹಳ್ಳಿ ಗ್ರಾಮದ ಸ.ನಂ 29ರ ಸರ್ಕಾರಿ ಖರಾಬ್ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.09 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 1.50 ಕೋಟಿಗಳಾಗಿರುತ್ತದೆ.
ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಮಲ್ಲಸಂದ್ರ, ನಗರೂರು ಮತ್ತು ಕದಲೂರು ಗ್ರಾಮಗಳ ಸ.ನಂ 29, 136 & 40ರ ಸರ್ಕಾರಿ ಖರಾಬು ಕಟ್ಟೆ, ಸ್ಮಶಾನ ಮತ್ತು ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 2.24 ಎಕರೆ/ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 9.05 ಕೋಟೆಗಳಾಗಿರುತ್ತದೆ. ಯಶವಂತಪುರ ಹೋಬಳಿಯ ಶೆಟ್ಟಿಹಳ್ಳಿ ಗ್ರಾಮದ ಸ.ನಂ 30 ಸರ್ಕಾರಿ ಖರಾಬ್ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.06 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.52 ಕೋಟಿಗಳಾಗಿರುತ್ತದೆ.
ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಕಟ್ಟುಗೊಲ್ಲಹಳ್ಳಿ ಗ್ರಾಮದ ಸ.ನಂ 54ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 2.15 ಎಕರೆ/ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ. 3.00 ಕೋಟಿಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ಕನ್ನಮಂಗಲ ಗ್ರಾಮದ ಸ.ನಂ 86ರ ಹಳ್ಳದ ಖರಾಬ್ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.03 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.20 ಲಕ್ಷಗಳಾಗಿರುತ್ತದೆ. ವರ್ತೂರು ಹೋಬಳಿಯ ಸಿದ್ಧಾಪುರ ಗ್ರಾಮದ ಸ.ನಂ 3/1ಎರ ಮುಫತ್ ಕಾವಲ್ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.27 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 5.40 ಕೋಟಿಗಳಾಗಿರುತ್ತದೆ.
ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಅಪರ ಜಿಲ್ಲಾಧಿಕಾರಿಯಾದ ಜಗದೀಶ್ ಕೆ ನಾಯಕ್ ಹಾಗೂ ಬೆಂಗಳೂರು ನಗರ ಜಿಲ್ಲೆಯ ವಿವಿಧ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು