2:11 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಪಾದಯಾತ್ರೆ ಮುಗಿಯುವಷ್ಟರಲ್ಲಿ ಸರಕಾರ ಪತನ: ಕುಮಾರಸ್ವಾಮಿ | ಅದು ನಿಮ್ಮ ಭ್ರಮೆ; ಸರಕಾರವನ್ನು ಅಲುಗಾಡಿಸಲೂ ಸಾಧ್ಯವಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

03/08/2024, 20:23

ಬೆಂಗಳೂರು(reporterkarnataka.com): ಬಿಜೆಪಿ- ಜೆಡಿಎಸ್ ಹಮ್ಮಿಕೊಂಡ ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪತನವಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಅದು ನಿಮ್ಮ ಭ್ರಮೆ. ನಮ್ಮ ಸರಕಾರವನ್ನು ಅಲುಗಾಡಿಸಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮುಂದಿನ 10 ವರ್ಷ ನಾವೇ ಸರ್ಕಾರದಲ್ಲಿ ಇರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಆದರೆ ಈ ಸರ್ಕಾರ 10 ತಿಂಗಳು ಮುಂದುವರಿಯಲಿ ನೋಡೋಣ ಎಂದು ಬಿಜೆಪಿ- ಜೆಡಿಎಸ್ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಕುಮಾರಸ್ವಾಮಿ ಅವರು, ಸವಾಲು ಎಸೆದಿದ್ದಾರೆ.
ನಿಮ್ಮ ಪಾಪದ ಕೊಡ ತುಂಬಿದೆ. ನಮ್ಮ ಪಾದಯಾತ್ರೆ ಮೈಸೂರು ತಲಪುವವರೆಗೆ ಈ ಸರ್ಕಾರದ ವಿಕೆಟ್ ಗಳು ಬೀಳಬೇಕು. ಅದು ನಾಯಕನಿಂದಲೇ ಶುರುವಾಗಬೇಕು ಎಂದು ಅವರು ಹೇಳಿದ್ದಾರೆ.
ಸಿದ್ದರಾಮಯ್ಯನವರೇ,ಮುಡಾ ಸರಕಾರದ ಆಸ್ತಿ. ಬಡಾವಣೆ ಆಗಿರುವ ಆಸ್ತಿಯನ್ನು ನಿಮ್ಮ ಬಾವಮೈದನ ಹೆಸರಿಗೆ ಮಾಡಲು ಅವಕಾಶ ಇದೆಯಾ? ಇದನ್ನ ಅಂಬೇಡ್ಕರ್ ಸಂವಿಧಾನದಲ್ಲಿ ಬರೆಯಲಾಗಿದೆಯೇ? ಸರ್ಕಾರದ ಜಮೀನನ್ನ ನಿಮ್ಮ ಬಾವಮೈದನ ಹೆಸರಿಗೆ ಹೇಗೆ ದಾಖಲಾತಿ ಮಾಡಿಕೊಟ್ಟರು. ಸಿದ್ದರಾಮಯ್ಯ ನನಗೆ ಇದ್ಯಾವುದು ಗೊತ್ತಿಲ್ಲ ಎನ್ನುತ್ತಾರೆ. ಅಲ್ಲಿ ನಡೆದ ಘಟನೆ ನಿಮ್ಮ ಗಮನಕ್ಕೆ ಬಾರದೇ ಆಗಿದೆಯಾ? ನಿಮ್ಮ ಪ್ರಭಾವ ಬೀರದೇ ಇಲ್ಲ ಎನ್ನುವುದಕ್ಕೆ ಸಾಧ್ಯವಿದೆಯಾ ಎಂದು ಸಿದ್ದರಾಮಯ್ಯ ಅವರಿಗೆ ಪ್ರಶ್ನೆಗಳನ್ನು ಸುರಿಮಳೆಗೈದಿದ್ದಾರೆ.
ಕುಮಾರಸ್ವಾಮಿ ಹೇಳಿಕೆಗೆ ರಾಮನಗರದಲ್ಲಿ ಡಿಸಿಎಂ ಶಿವಕುಮಾರ್ ಉತ್ತರ ನೀಡಿದ್ದಾರೆ. ಅದು ನಿಮ್ಮ ಭ್ರಮೆ. ತಿರುಕನ ಕನಸು. ನಮ್ಮ ಸರ್ಕಾರವನ್ನು ಅಲ್ಲಾಡಿಸುವುದಕ್ಕೆ ಆಗುವುದಿಲ್ಲ ಎಂದು ಹೇಳಿದ್ದಾರೆ.
ಮುಡಾ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕೊಡಲು ರಾಮನಗರದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವೆಂಬರ್, ಡಿಸೆಂಬರ್ ಗೆ ಸರ್ಕಾರ ಪಲ್ಟಿ ಮಾಡುತ್ತೇವೆ ಅಂತಾರೆ. ಅದೇನು ಹೊಡೆಯೋಕೆ ಮಡಕೆನಾ ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ. ದೇಶವನ್ನ ಆಳುವ ಶಕ್ತಿ ಮತ್ತೆ ಉದ್ಭವ ಆಗುತ್ತೆ. 2028ಕ್ಕೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದಾರೆ. ಪಾದಯಾತ್ರೆ ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಮೈಸೂರು, ಪಾಂಡವಪುರ ಕಡೆ ಕಾಂಗ್ರೆಸ್ ಶಾಸಕರು ಇದ್ದಾರೆ. ನಿನ್ನೆ ಜೆಡಿಎಸ್ ಬಾವುಟವೇ ಇರಲಿಲ್ಲ. ನಾವು ನಿನ್ನೆ ಮಾತಾಡಿದ್ದಕ್ಕೆ ಜೆಡಿಎಸ್ ಬಾವುಟ ಹಾಕಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು