7:33 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಬಗ್ಗೆ ಸಿಎಂ ಜತೆ ಚರ್ಚೆ: ವಿಧಾನ ಪರಿಷತ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

13/12/2024, 22:50

ಬೆಳಗಾವಿ(reporterkarnataka.com): ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಕೇರಳ ರಾಜ್ಯದಲ್ಲಿರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ.ಆದರೆ ಹೆಚ್ಚಳ ಮಾಡುವ ಕುರಿತ ಮನವಿಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದರು.
ಗ್ರಾಮ ಪಂಚಾಯತ್ ಸದಸ್ಯ ರಿಗೆ ಪಿಂಚಣಿ,ಉಚಿತ ಬಸ್ ಪಾಸ್ ಮತ್ತು ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ ಎಂದು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಪರಿಶೀಲಿಸಲಾಗಿರುತ್ತದೆ.
ಅಧಿಕಾರಿ/ ಕೆಲವು ಸಿಬ್ಬಂದಿಗಳ ಸೇವಾ ವಿಷಯ/ ಬೇಡಿಕೆಗಳನ್ನು ಪರಿಶೀಲಿಸಲು ಆಯುಕ್ತರು, ಪಂಚಾಯತ್ ರಾಜ್ ಆಯುಕ್ತಾಲಯ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಸದರಿ ಸಮಿತಿಗೆ ಪರಿಶೀಲಿಸಿ ವರದಿಯನ್ನು ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಬೇಡಿಕೆಗಳ ಕುರಿತು ಪರಿಶೀಲಿಸಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು