12:32 AM Monday7 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

Grama Panchayat | ಗ್ರಾಮ ಪಂಚಾಯತಿ ಆದಾಯದಲ್ಲಿ ಸಾರ್ವಕಾಲಿಕ ಹೆಚ್ಚಳ: ಕಳೆದ ವರ್ಷಕ್ಕಿಂತಲೂ 500 ಕೋಟಿ ಆದಾಯ ಅಧಿಕ

06/04/2025, 23:19

ಬೆಂಗಳೂರು(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಆಡಳಿತದಲ್ಲಿ ಮೌನ ಕ್ರಾಂತಿಯನ್ನು ನಡೆಸುತ್ತಿದ್ದು ವರ್ಷದಿಂದ ವರ್ಷಕ್ಕೆ ದಾಖಲೆಯ ಆದಾಯ ಸಂಗ್ರಹಣೆಯ ಮೂಲಕ ಪಂಚಾಯತ್ ಆರ್ಥಿಕತೆಯನ್ನು ಬಲಪಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2022–23ನೆ ಸಾಲಿನಲ್ಲಿ ಇಲಾಖೆಯು 571.94 ಕೋಟಿ ರೂ. ಆದಾಯ ಗಳಿಸಿದ್ದರೆ, 2023–24ನೆ ಸಾಲಿನಲ್ಲಿ ಅದು 767.87 ಕೋಟಿ ರೂ.ಗಳಿಗೆ ಏರಿತು. 2024–25 ಸಾಲಿನಲ್ಲಿ ಆದಾಯ ಗರಿಷ್ಠ ಮಟ್ಟ ತಲುಪಿ 1272.43 ಕೋಟಿ ರೂ. ತಲುಪಿದ್ದು ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆದಾಯ ಸಂಗ್ರಹಣೆಯಲ್ಲಿ ಸಾರ್ವಕಾಲಿಕ ದಾಖಲೆ ಆಗಿದೆ ಎಂದು ಸಚಿವರು ಹೇಳಿದ್ದಾರೆ.
ಕಳೆದ 18 ತಿಂಗಳುಗಳಲ್ಲಿ, ನಾವು 13,91,678 ಹೊಸ ಆಸ್ತಿಗಳನ್ನು ತೆರಿಗೆ ನೋಂದಣಿ ವ್ಯಾಪ್ತಿಗೆ ತರುವ ಮೂಲಕ ಪಂಚಾಯತ್ ಆಸ್ತಿಗಳನ್ನು 1,43,91,438ಕ್ಕೆ ಹೆಚ್ಚಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿರುವ ಸಚಿವರು ಗ್ರಾಮೀಣ ಆಸ್ತಿ ನಿರ್ವಹಣಾ ವೇದಿಕೆಯಾದ ಇ-ಸ್ವತ್ತು ಹಾದಿಯಲ್ಲಿ ನಡೆಯುತ್ತಿರುವ ದಿಟ್ಟ ಸುಧಾರಣೆಗಳೊಂದಿಗೆ, ನಾವು ಇನ್ನೂ ಹೆಚ್ಚಿನ ಆದಾಯ ಉತ್ಪಾದನೆಗೆ ವೇದಿಕೆಯನ್ನು ಸಜ್ಜುಗೊಳಿಸುತ್ತಿದ್ದೇವೆ ಮತ್ತು ತಳಮಟ್ಟದಲ್ಲಿ ಹೆಚ್ಚು ಸ್ಪಂದಿಸುವಂತೆ ಪಂಚಾಯತ್‌ಗಳಿಗೆ ಹೆಚ್ಚುಅಧಿಕಾರ ನೀಡುತ್ತಿದ್ದೇವೆ ಈ ಮೂಲಕ ನಾವು ಕೇವಲ ಹಳ್ಳಿಗಳನ್ನು ಬಲಪಡಿಸುತ್ತಿಲ್ಲ, ಅದರೊಂದಿಗೆ ಕರ್ನಾಟಕದ ಮುಂದಿನ ಆರ್ಥಿಕ ಎಂಜಿನ್‌ಗಳಿಗೆ ಶಕ್ತಿ ತುಂಬುತ್ತಿದ್ದೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು