5:19 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಸದಸ್ಯನಿಂದ ಮದ್ಯದಂಗಡಿಗೆ ಜೈ: ರೈತ ಸಂಘ, ಹಸಿರು ಸೇನೆ ಗರಂ; ಅಮಾನತಿಗೆ ಆಗ್ರಹ

19/07/2021, 14:26

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಉತ್ತರ ಕರ್ನಾಟಕದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಮದ್ಯಪಾನದ ವಿರುದ್ಧ ದೊಡ್ಡ ಪ್ರಮಾಣದಲ್ಲಿ ಜನಾಂದೋಲನವೇ ನಡೆಸುತ್ತಿದ್ದರೆ, ಅಥಣಿಯಲ್ಲಿ ಜನರಿಂದ ಆರಿಸಿ ಹೋದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಮದ್ಯಪಾನ ಪರ ಜೈ ಹಾಕಿದ ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ.

ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಸುಮಾರು ಒಂದು ತಿಂಗಳಿಂದ ಗ್ರಾಮಸ್ಥರು ಮದ್ಯದಂಗಡಿ ತೆರವು ಗೊಳಿಸುವಂತೆ ಹೋರಾಟ ನಡೆಸುತ್ತಿದ್ದಾರೆ. ಆದರೆ ಇಲ್ಲಿ ಬಿಜೆಪಿ ಯುವ ನಾಯಕ ಹಾಗೂ ಸಚಿವರೊಬ್ಬರ ಆಪ್ತ ವಲಯದಲ್ಲಿ ಗುರುತಿಸಿಕೊಂಡ ಅಶೋಕ್ ಭಾನುದಾಸ್ ಮಾನೆ ಅವರು ಸಾಮಾಜಿಕ ಹಿತ ಕಾಯುವುದನ್ನು ಬಿಟ್ಟು ಎಣ್ಣೆ ಬೇಕು ಎಂದು ನಶೆಯಲ್ಲಿ ಘೋಷಣೆ ಕೂಗಿದ ಘಟನೆ ನಡೆದಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ್ ಪಡಸಲಗಿ ಈ ಘಟನೆಯನ್ನು ಖಂಡಿಸಿ ಈತನ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಅಥಣಿ ತಾಲೂಕ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಈ ವಿಷಯದ ಬಗ್ಗೆ ಸಾಮಾಜಿಕ ಹೋರಾಟಗಾರರು ಅಥಣಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ಕೂಡಲೇ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಮೇಲಾಧಿಕಾರಿಗಳು ಗ್ರಾಮಸ್ಥರು ನೋವಿಗೆ ಸ್ಪಂದಿಸುತ್ತಾರಾ ಹಾಗೂ ಅಶೋಕ್ ಭಾನುದಾಸ್ ಮಾನೆ ವಿರುದ್ಧ ಕ್ರಮ ಕೈಗೊಲ್ಲುತ್ತರಾ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು