5:20 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಸ್ಕಿ ಗ್ರಾಮೀಣ ಪ್ರದೇಶದಲ್ಲೂ ಕೊರೊನಾ ಆರ್ಭಟ: ಸಾಮಾನ್ಯ ಜನಜೀವನ ತತ್ತರ: ಜೀವ ಕೈಯಲ್ಲಿ ಹಿಡಿದುಕೊಳ್ಳುವ ಸ್ಥಿತಿ!!

22/05/2021, 08:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಮಸ್ಕಿ ಕ್ಷೇತ್ರ ಸೇರಿದಂತೆ ತಾಲೂಕಿನ  ಎಲ್ಲಾ ಹಳ್ಳಿ ಗ್ರಾಮೀಣ ಪ್ರದೇಶಗಳು ಮಹಾಮಾರಿ ಕೊರೊನಾಕ್ಕೆ ತತ್ತರಿಸಿದೆ.ಹೊರಗಡೆ ತಿರುಗಾಡಲು ಹೆದರಿ ಜೀವ ಅಂಗೈಯಲ್ಲಿ ಹಿಡಿದುಕೊಂಡು ಜೀವನ ಮಾಡುವ ಪರಿಸ್ಥಿತಿ ಎದುರಾಗಿದೆ. ದಿನದಿನಕ್ಕೂ ಹೆಚ್ಚುತ್ತಿರುವ ಈ ರೋಗವು ಜನಜೀವನವನ್ನು ಹಿಂಡಿ ಹಿಪ್ಪೆ ಮಾಡುವ ಪರಿಸ್ಥಿತಿ ಎದುರಾಗಿದೆ.

ಜಿಲ್ಲಾಡಳಿತ ಕೋವಿಡ್ ತಡೆಗಟ್ಟಲು ಕಠಿಣ ಲಾಕ್ ಡೌನ್ ಜಾರಿ ಮಾಡಿದ್ದರೂ ಸಹ ಮಸ್ಕಿ ಕ್ಷೇತ್ರದ ಜನತೆ ಕ್ಯಾರೆ ಅನ್ನುತ್ತಿಲ್ಲ. ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ್ ಹಾಕುವುದಿಲ್ಲ. ಸ್ಯಾನಿಟೈಸರ್ ಬಳಸುವುದೇ ಇಲ್ಲ. ತಾಂಡಗಳಲ್ಲಿ  ದೊಡ್ಡಿಗಳಲ್ಲಿ ಇಲ್ಲವೇ ಇಲ್ಲ ಇಂತಹ ಸಂದರ್ಭದಲ್ಲಿ ನಾಲ್ಕು ದಿನಗಳಲ್ಲಿ 75ಕ್ಕೂ ಹೆಚ್ಚು ಸೋಂಕಿತರು ಕಂಡುಬಂದಿದ್ದಾರೆ. ಜನರು ವಿನಾಕಾರಣ ಹೊರಗಡೆ ಬರುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಮಹಾರಾಷ್ಟ್ರ, ಉಡುಪಿ, ಶಿವಮೊಗ್ಗ ಕಡೆ ದುಡಿಯಲು ಹೋದವರು ತಮ್ಮ ಗ್ರಾಮಕ್ಕೆ ವಾಪಸ್ಸಾಗಿ ತಮಗೆ ಅಂಟಿದ ಸೋಂಕು ಗ್ರಾಮೀಣ ಪ್ರದೇಶಕ್ಕೂ ಹಂಚುತ್ತಿದ್ದಾರೆ. ಜಿಲ್ಲಾಡಳಿತ ಗ್ರಾಮೀಣ ಮಟ್ಟದಲ್ಲಿ ಹರಡುವುದನ್ನು ತಡೆಗಟ್ಟುವಲ್ಲಿ ವಿಫಲವಾಗಿದೆ. ಪಟ್ಟಣದಲ್ಲಿ ಬಾರಿ ಕೋಟಿಗಳನ್ನು ಹಾಕಿದ್ದು ವಾಹನ ಚಾಲಕರು ಅವುಗಳನ್ನು ಕಿತ್ತು ತಿರುಗಾಡುತ್ತಾರೆ. ಪುರಸಭೆ, ಪಟ್ಟಣ ಸೇರಿ ದಂತೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತದೆ.

ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಸ್ಯಾನಿಟೈಸರ್ ಸಿಂಪಡಿಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ್ ಪಾಟೀಲ್, ಕೃಷ್ಣ ಹುನಗುಂದ, ಶರಣೆಗೌಡ ಹಂದ್ರಾಳ, ತಿಮ್ಮಣ್ಣ ಬೋವಿ, ಮಲ್ಲಿಕಾರ್ಜುನ್, ಮಂಜುನಾಥ್, ತಿಮ್ಮನಗೌಡ, ಬಸವಲಿಂಗಪ್ಪ ಗೌಡ , ಸಂದೇಶ್ ಜಯಶ್ರೀ ಪಾಟೀಲ್ ಸೇರಿದಂತೆ ಗ್ರಾಮಗಳ ಸಾಮಾಜಿಕ ಅಂತರ ಕಾಪಾಡುವುದರ ಜೊತೆಗೆ ಹೊರಗಡೆ ಬರಬೇಡಿ. ನಿಮ್ಮ ಜೀವ ನಿಮ್ಮ ಕೈಯಲ್ಲಿದೆ ಎನ್ನುವ ಧ್ವನಿಯಲ್ಲಿ ಜನರಿಗೆ ಎಚ್ಚರಿಸುವ ದೃಶ್ಯ ಕಂಡುಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು