11:50 PM Thursday14 - November 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಕ್ಸಲ್ ಚಟುವಟಿಕೆ ಪ್ರಕರಣ; ಇಬ್ಬರು ಶಂಕಿತ ನಕ್ಸಲರು ಸೇರಿ 4 ಮಂದಿ… ಬೆಂಗಳೂರು ಸೈಂಟ್ ಜೋಸೆಫ್ ವಿವಿಯ ಫ್ಯಾಕಲ್ಟಿ ಡೆವಲಪ್ ಮೆಂಟ್ ಪ್ರೋಗ್ರಾಂ: ಹೆಲ್ತ್ ಕೇರ್… ಶ್ರೀನಿವಾಸಪುರ ತಾಲೂಕು ವಕೀಲರಿಂದ ಅನಿರ್ದಿಷ್ಟ ಪ್ರತಿಭಟನೆ: ನ್ಯಾಯಾಲಯ ಕಲಾಪಕ್ಕೆ ಬಹಿಷ್ಕಾರ ಪವಿತ್ರ ಯಾತ್ರಾ ಸ್ಥಳ ಸುತ್ತೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ರಂಗಸ್ವಾಮಿ ಅವಿರೋಧ… ತುಮಕೂರಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ-2024: ಸಿಎಂ ಸಿದ್ದರಾಮಯ್ಯ ಲಾಂಛನ ಅನಾವರಣ ಮೂಡಿಗೆರೆ: ಮದುವೆ ಸಮಾರಂಭದಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿದ ಖದೀಮರು ಸಂಡೂರು ವಿಧಾನಸಭೆ ಉಪ ಚುನಾವಣೆ: ಶೇ.76.24ರಷ್ಟು ಮತದಾನ ಕಾಫಿನಾಡಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ?: ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಆರಂಭ ಗಣಿ ಮಾಫಿಯಾ, ಹಣದ ಶಕ್ತಿ, ಸುಳ್ಳು ಪ್ರಚಾರದಿಂದ ರಕ್ಷಿಸಲು ಮತ ಚಲಾಯಿಸಿ: ಗೋಪಿನಾಥ್… ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ

ಇತ್ತೀಚಿನ ಸುದ್ದಿ

ಗ್ರಂಥಾಲಯಗಳು ಅರಿವಿನ ಜ್ಞಾನದೀವಿಗೆಗಳು: ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ

14/11/2024, 23:50

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಗ್ರಂಥಾಲಯಗಳು ಅರಿವಿನ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದಲು ಬರುವವರಿಗೆ, ಜ್ಞಾನದ ಹೊಸ ಹೊಳಹನ್ನು ನೀಡುವ ಅಕ್ಷಯ ಭಂಡಾರಗಳಾಗಿವೇ. ಗ್ರಂಥಾಲಯಗಳ ಸಂಪನ್ಮೂಲಗಳು ಎಂದಿಗೂ ಎಲ್ಲಿಯೂ ಬತ್ತಿಹೋಗುವುದಿಲ್ಲ. ಪ್ರಾಚೀನ ಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ ವಿಷಯಗಳನ್ನು ತಿಳಿಸಲು ಸಿದ್ಧವಿರುವುವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಬೇಕಾದ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅಭಿಪ್ರಾಯಾಪಟ್ಟರು.
ಇಂದು ಜಿಲ್ಲಾ ಕೇಂದ್ರ ಗ್ರಂಥಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ರಂಥಾಲಯ ಸಪ್ತಾಹಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಆಧುನಿಕ ತಂತ್ರಜ್ಞಾನದಿಂದ ಇಂದಿನ ಮಕ್ಕಳಲ್ಲಿ ಓದುವ ಹವ್ಯಾಸ ಕುಂಠಿತಗೊಳ್ಳುತ್ತಿದೆ. ಒಂದು ವಿಷಯದ ಬಗ್ಗೆ ಅನೇಕ ಗ್ರಂಥಗಳನ್ನು ನೋಡಬೇಕಾದರೆ ನಾವು ಗ್ರಂಥಾಲಯಗಳಿಗೆ ಹೋಗಬೇಕು. ಗ್ರಂಥಾಲಯವೆಂದರೆ ಅಲ್ಲಿ ಎಲ್ಲ ಭಾಷೆಯ ಸಮೃದ್ಧ ಆಗರವಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳು ಇರಬೇಕು. ಇತ್ತೀಚಿಗೆ ಪುಸ್ತಕ ಗಳ ಸ್ಥಾನವನ್ನು ಇಂಟರ್ನೆಟ್ ಕಬಳಿಸಿದೆ. ಆದರೆ ಪುಸ್ತಕ ಓದಿದಷ್ಟು ಪರಿಣಾಮಕಾರಿಯಾದಂತಹ ಫಲಿತಾಂಶ ಜಾಲತಾಣಗಳಲ್ಲಿ ದೊರೆಯುವುದಿಲ್ಲ ಎಂದರು.
ಪುಸ್ತಕಗಳು ಆತ್ಮಸ್ಥೆರ್ಯವನ್ನು ಹೆಚ್ಚಿಸುತ್ತದೆ. ತಾನೇ ಸ್ವತಂತ್ರ ವಾಗಿ ಪುಸ್ತಕ ಬರೆಯಲು ಪ್ರೆರೇಪಿಸುತ್ತದೆ. ಮುಂದಿನ ಭವಿಷ್ಯದ ಪ್ರಜೆಗಳಾದ ನೀವು ಪುಸ್ತಕಗಳ ಜ್ಞಾನವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಹೊರಬೇಕು ಎಂದು ಅವರು ನುಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ. ವಿ. ಗೋಪಿನಾಥ್ ಅವರು ಮಾತನಾಡಿ ಗ್ರಂಥಗಳು ನಮ್ಮನ್ನು ಯಾರದೇ ಸಹಾಯವಿಲ್ಲದೆ ಗುರಿ ಮುಟ್ಟಲು ಸಹಾಯ ಮಾಡುತ್ತವೆ. ಕೀಳರಿಮೆ ಬಿಟ್ಟು ಕಠಿಣ ಪರಿಶ್ರಮ ಹಾಕಿದರೆ ಎಂತಹ ಸವಾಲನ್ನು ಸುಲಭವಾಗಿ ಪರಿಹರಿಸಬಹುದು ಎಂದರು.
ದೊಡ್ಡ ದೊಡ್ಡ ಸಾಧಕರೆಲ್ಲರೂ ಸಾಧಾರಣ ಕುಟುಂಬದಿಂದ ಬಂದವರು. ಎತ್ತರಕ್ಕೆ ಏರಲು ನಿರಂತರ ಅಧ್ಯಯನ ಸಹಕಾರಿ. ಇ ಸಪ್ತಾಹದಲ್ಲಿ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುಸ್ತಕಗಳು ಜೀವನದ ಪ್ರೇರಣೆ ನೀಡುತ್ತವೆ ಎಂದು ಅವರು ನುಡಿದರು.


ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ ಮಕ್ಕಳುದಿನನಿತ್ಯದ ಪಠ್ಯದ ಜೊತೆಗೆ ಪ್ರಚಲಿತ ವಿದ್ಯಮಾನಗಳ ಕುರಿತು ಅರಿವು ಬೆಳೆಸಿಕೊಳ್ಳಬೇಕು. ವೃತ್ತಪತ್ರಿಕೆಗಳನ್ನು ಓದುವುದನ್ನು ರೂಢಿಸಿಕೊಳ್ಳಬೇಕು.ಸಮಾಚಾರ ಸಂಗ್ರಹಣೆ ಉತ್ತಮ ಹವ್ಯಾಸವಾಗಿದೆ.ಈ ನಿಟ್ಟಿನಲ್ಲಿ ಗ್ರಂಥಾಲಯಗಳು ಜ್ಞಾನ ಭಂಡಾರ ವಾಗಿವೆ. ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಸುಕೃತ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ವಿಜಯಲಕ್ಷ್ಮಿ, ಗ್ರಂಥಾಲಯ ಇಲಾಖೆ ಉಪನಿರ್ದೇಶಕರು ಸಿ. ಗಣೇಶ್, ಇಲಾಖೆಯ ಅಧಿಕಾರಿ ಸಿಬ್ಬಂದಿಗಳು, ಹವ್ಯಾಸಿ ಓದುಗರು, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು