ಇತ್ತೀಚಿನ ಸುದ್ದಿ
Grants | ತೀರ್ಥಹಳ್ಳಿ ಅಭಿವೃದ್ಧಿ ಕಾಮಗಾರಿಗೆ ಅನುದಾನ: ಸಚಿವ ಜಮೀರ್ ಗೆ ಪಟ್ಟಣ ಪಂಚಾಯತ್ ಅಧ್ಯಕ್ಷ ಅಸಾದಿ ಮನವಿ
25/02/2025, 22:10

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಹಲವು ಪ್ರದೇಶಗಳಲ್ಲಿ ರಾಜ ಕಾಲುವೆ, ಒಳ ಚರಂಡಿ ವ್ಯವಸ್ಥೆ, ಮೂಲಭೂತ ಸೌಕರ್ಯವಿಲ್ಲದೆ ಜನರಿಗೆ ತೊಂದರೆಯಾಗುತ್ತಿದ್ದು ಈ ಕಾರಣದಿಂದ ತೀರ್ಥಹಳ್ಳಿ ಅಭಿವೃದ್ಧಿ ಕಾಮಗಾರಿಗೆ ಅನುದಾನ ಕೊಡಿಸಬೇಕೆಂದು ವಸತಿ, ವಖ್ಫ್, ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರಿಗೆ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಹಮತ್ ಉಲ್ಲಾ ಅಸಾದಿ ಮನವಿ ಸಲ್ಲಿಸಿದರು.
ಪಟ್ಟಣದ ಸುಮಾರು 6 ರಿಂದ 7 ವಾರ್ಡ್ಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಒಳಚರಂಡಿ ವ್ಯವಸ್ಥೆ,ಇನ್ನು ಬುಕ್ಲಾಪುರದಲ್ಲಿ ಅಲೆಮಾರಿ ಜನಾಂಗದವರ 23 ಕುಟುಂಬಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಜಿಲ್ಲಾಧಿಕಾರಿಗಳು ಜಾಗ ಮಂಜೂರು ಮಾಡಿದ್ದೂ ಅಲ್ಲಿ ಚರಂಡಿ ವ್ಯವಸ್ಥೆ, ರಸ್ತೆ ಕಾಮಗಾರಿ, ಶೌಚಾಲಯ ನಿರ್ಮಾಣ, ವಿದ್ಯುತ್ಕರಣ ಹೀಗೆ ಹಲವು ಕಾಮಗಾರಿಗಳು ಆಗಬೇಕಿದ್ದು ತಮ್ಮ ಇಲಾಖೆಯಿಂದ ಅನುದಾನ ಕೊಡಿಸಬೇಕೆಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೀತಾ ರಮೇಶ್, ಸದಸ್ಯರಾದ ಸುಶೀಲ ಶೆಟ್ಟಿ, ಶಬನಮ್, ಮಂಜುಳಾ ನಾಗೇಂದ್ರ ಸೇರಿ ಹಲವರು ಉಪಸ್ಥಿತರಿದ್ದರು