9:56 PM Wednesday25 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

ಬೆಂಗಳೂರಿನಾಚೆಗೂ ಬೆಳವಣಿಗೆ; ರಾಜ್ಯಾದ್ಯಂತ ಸಮತೋಲಿತ ಅಭಿವೃದ್ಧಿಯೇ ನಮ್ಮ ಸಂಕಲ್ಪ: ಐಟಿಬಿಟಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

25/11/2026, 21:51

ಮಂಗಳೂರು(reporterkarnataka.com):ಬೆಂಗಳೂರಿನಾಚೆಗೂ ಅಭಿವೃದ್ಧಿ- ಬೆಳವಣಿಗೆ, ರಾಜ್ಯಾದ್ಯಂತ ಅವಕಾಶಗಳ ವಿಸ್ತರಣೆ. ಇದೇ ಸಮತೋಲಿತ ಅಭಿವೃದ್ಧಿಯ ನಮ್ಮ ಸಂಕಲ್ಪ ಎಂದು ಐಟಿಬಿಟಿ ಸಚಿವರೂ ಆಗಿರುವ ಗೃಹ ಮಂತ್ರಿ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಇಂದು ಮಂಗಳೂರಿನಲ್ಲಿ ಡೆಲಾಯ್ಟ್ ಸಂಸ್ಥೆಯ ಭಾರತದ 27ನೇ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ ಸರಕಾರದ ಬಿಯಾಂಡ್ ಬೆಂಗಳೂರು ದೃಷ್ಟಿಕೋನ ಸ್ಪಷ್ಟವಾಗಿದೆ. ಪ್ರತಿಭೆಗಳು ಬೆಂಗಳೂರಿಗೆ ಬರಬೇಕೆಂಬ ನಿರೀಕ್ಷೆಯ ಬದಲು, ಪ್ರತಿಭೆಗಳಿರುವ ಪ್ರದೇಶಗಳಿಗೇ ಹೂಡಿಕೆ ಮತ್ತು ಉದ್ಯೋಗಾವಕಾಶಗಳನ್ನು ಕೊಂಡೊಯ್ಯಬೇಕು ಎಂದು ಅವರು ಸ್ಪಷ್ಟಪಡಿಸಿದರು.
ಪ್ರತಿಭಾವಂತ ಮಾನವ ಸಂಪನ್ಮೂಲ, ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಉತ್ತಮ ಜೀವನಮಟ್ಟ ಹೊಂದಿರುವ ಮಂಗಳೂರು, ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಅಪಾರ ಅವಕಾಶಗಳನ್ನು ಹೊಂದಿದೆ. ಬೆಂಗಳೂರಿನ ನಂತರ ಕರ್ನಾಟಕದ ಜಿಎಸ್‌ಡಿಪಿಗೆ ಅತಿ ಹೆಚ್ಚು ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ. ರಾಜ್ಯದ ಒಟ್ಟು ಜಿಎಸ್‌ಡಿಪಿಯಲ್ಲಿ ಜಿಲ್ಲೆಯ ಪಾಲು ಶೇ. 5.3 ಆಗಿದೆ ಎಂದು ಸಚಿವರು ನುಡಿದರು.
ಮಂಗಳೂರಿನಲ್ಲಿ ಡೆಲಾಯ್ಟ್‌ನ ನೂತನ ಕಚೇರಿ ಆರಂಭವಾಗಿರುವುದು ಬಿಯಾಂಡ್ ಬೆಂಗಳೂರು ಕಾರ್ಯತಂತ್ರಕ್ಕೆ ಖಾಸಗಿ ವಲಯದ ಮಹತ್ವದ ಸಹಭಾಗಿತ್ವವಾಗಿದೆ. ಇದು ಸ್ಥಳೀಯ ಪ್ರತಿಭೆಗಳಿಗೆ ಹೊಸ ಉದ್ಯೋಗಾವಕಾಶಗಳನ್ನೂ ಸೃಷ್ಟಿಸಲಿದೆ. ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಅಭಿವೃದ್ಧಿಗಾಗಿ ಸುಮಾರು ₹6,000 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದರು.
ಸ್ಥಳೀಯ ಸಾಮರ್ಥ್ಯ ಮತ್ತು ಸಂಪನ್ಮೂಲಗಳನ್ನು ಗುರುತಿಸಿ, ಹೂಡಿಕೆ ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು LEAP ಕಾರ್ಯಕ್ರಮ ರೂಪಿಸಲಾಗಿದೆ. ಸ್ಥಳೀಯ ಕಾಲೇಜುಗಳೊಂದಿಗೆ ಕೈಜೋಡಿಸಿ, ವಿದ್ಯಾರ್ಥಿಗಳಿಗೆ ಉದ್ಯಮಗಳ ಅಗತ್ಯಕ್ಕೆ ತಕ್ಕ ಕೌಶಲ್ಯ ಮತ್ತು ತರಬೇತಿ ನೀಡುವ ಮೂಲಕ ಉದ್ಯೋಗಕ್ಕೆ ಸಿದ್ಧವಾದ ಮಾನವ ಸಂಪನ್ಮೂಲ ರೂಪಿಸುವುದು ನಮ್ಮ ಆದ್ಯತೆ ಎಂದು ಅವರು ನುಡಿದರು.


ಎಲಿವೇಟ್ ಯೋಜನೆಯಡಿ ಅರ್ಹ ನವೋದ್ಯಮಗಳಿಗೆ ಯಾವುದೇ ಪಾಲನ್ನು ಪಡೆಯದೆ ₹1 ಕೋಟಿವರೆಗೆ ಅನುದಾನ ನೀಡಲಾಗುತ್ತಿದೆ.
ಸರ್ಕಾರಿ ವಲಯದ ಸಮಸ್ಯೆಗಳಿಗೆ ನವೋದ್ಯಮಗಳು ಪರಿಹಾರಗಳನ್ನು ಪರೀಕ್ಷಿಸಲು ನಿಯಂತ್ರಣಾತ್ಮಕ ಪ್ರಯೋಗ ವ್ಯವಸ್ಥೆ ರೂಪಿಸಲಾಗಿದೆ. ಈಗಾಗಲೇ 16 ನವೋದ್ಯಮಗಳು ನೋಂದಣಿಯಾಗಿದ್ದು, ಈ ಸಂಖ್ಯೆಯನ್ನು 100ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು.
ಮಂಗಳೂರಿನಲ್ಲಿ ಆರೋಗ್ಯ ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸುವ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ ಎಂದು ಸಚಿವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು