ಇತ್ತೀಚಿನ ಸುದ್ದಿ
ಗೃಹ ಸಚಿವರ ತವರು ಜಿಲ್ಲೆಯಲ್ಲಿ ಯುವಕನ ಹತ್ಯೆ: ಒಬ್ಬನ ಬಂಧನ; ಪೊಲೀಸ್ ಬಂದೋಬಸ್ತ್ ನಲ್ಲಿ ಅಂತಿಮಯಾತ್ರೆ: 144 ಸೆಕ್ಷನ್ ಜಾರಿ
21/02/2022, 13:06
ಶಿವಮೊಗ್ಗ (reporterkarnataka.com) : ಶಿವಮೊಗ್ಗದಲ್ಲಿ ಯುವಕನೊಬ್ಬನ ಹತ್ಯೆ ನಡೆದಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆದಿದೆ. ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ನಗರದ ಭಾರತಿ ಕಾಲನಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಇರಿಯಲಾಗಿತ್ತು.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಯುವಕನನ್ನು ತಕ್ಷಣ ದಾಖಲಾಯಿಸಿತಾದರೂ ಅಷ್ಟೊತ್ತಿಗೆ ಆತನ ಅಸುನೀಗಿದ್ದ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂರೆ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆ, ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ ಹೀಗೆ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಯುತ್ತಿದೆ.